ಚಿತ್ರ ಕೃಪೆ: ಮೊಹಮ್ಮದ್ ಶಮಿ
ನವದೆಹಲಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆ ಗುರಿಯಾಗಿಸಿ ಭಾರತೀಯ ಸಶಸ್ತ್ರ ಪಡೆಗಳು ನಡೆಸಿರುವ 'ಆಪರೇಷನ್ ಸಿಂಧೂರ' ಕಾರ್ಯಾಚರಣೆಗೆ ಕ್ರೀಡಾಪಟುಗಳಿಂದಲೂ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.
ಕ್ರಿಕೆಟ್‌ನ ಆರಾಧ್ಯ ದೈವ, ದಿಗ್ಗಜ ಸಚಿನ್ ತೆಂಡೂಲ್ಕರ್, ದೇಶದ ಒಗ್ಗಟ್ಟು ಹಾಗೂ ಶಕ್ತಿಯ ಬಗ್ಗೆ ಪ್ರಶಂಸಿಸಿದ್ದಾರೆ. 'ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ. ನಾವೆಲ್ಲರೂ ಒಂದೇ ತಂಡ, ಜೈ ಹಿಂದ್' ಎಂದು ಹೇಳಿದ್ದಾರೆ.
ಟೀಮ್ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗೌಂಭೀರ್, ಮಾಜಿ ಕ್ರಿಕೆಟಿಗರಾದ ವೀರೇಂದ್ರ ಸೆಹ್ವಾಗ್, ಇರ್ಫಾನ್ ಪಠಾಣ್, ಸುರೇಶ್ ರೈನ್, ಶಿಖರ್ ಧವನ್ ಸೇರಿದಂತೆ ಪ್ರಮುಖರು ಸಾಮಾಜಿಕ ಮಾಧ್ಯಮಗಳಲ್ಲಿ ಭಾರತೀಯ ಸಶಸ್ತ್ರ ಪಡೆಯ ಕಾರ್ಯಾಚರಣೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಭಾರತೀಯ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ ಸಶಸ್ತ್ರ ಪಡೆಯ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ.
ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಒಲಿಂಪಿಕ್ ಕಂಚಿನ ಪದಕ ವಿಜೇತ ಬಾಕ್ಸರ್ ವಿಜೇಂದರ್ ಸಿಂಗ್, ಕುಸ್ತಿಪಟು ಯೋಗೇಶ್ವರ್ ದತ್ ಸಹ ಸೇನೆಯ ಕಾರ್ಯಾಚರಣೆಯನ್ನು ಹೊಗಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.