ಹುಬ್ಬಳ್ಳಿ: ರಾಷ್ಟ್ರೀಯ ಮಟ್ಟದ ಪ್ಯಾರಾ ಅಥ್ಲೀಟ್ ಹಾಗೂ ಕ್ರಿಕೆಟಿಗರಾಗಿದ್ದ ಮೊಹಮ್ಮದ್ ಅತ್ತಾರ (55) ಗುರುವಾರ ಧಾರವಾಡದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿ ಇದ್ದಾರೆ.
ಅಥ್ಲೆಟಿಕ್ಸ್‌ನಲ್ಲಿ ಡಿಸ್ಕಸ್ ಹಾಗೂ ಜಾವಲಿನ್ ಎಸೆತ ಸ್ಪರ್ಧೆಗಳಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಆಹ್ವಾನಿತ ಟೂರ್ನಿಗಳಲ್ಲಿ ಪಾಲ್ಗೊಂಡಿದ್ದರು. 1992–93ರ ಸಮಯದಲ್ಲಿ ಕರ್ನಾಟಕ ರಾಜ್ಯ ಅಂಗವಿಕಲರ ಕ್ರಿಕೆಟ್ ತಂಡದ ನಾಯಕರಾಗಿದ್ದರು.
ಧಾರವಾಡದ ಎಸ್‌ಡಿಎಂ ಕ್ರಿಕೆಟ್ ಅಕಾಡೆಮಿ ಹಾಗೂ ವಸಂತ ಮುರ್ಡೇಶ್ವರ ಕ್ರಿಕೆಟ್ ಅಕಾಡೆಮಿಯಲ್ಲಿ ಕೋಚ್ ಆಗಿ ಕೆಲಸ ಮಾಡಿದ್ದರು. ಇವರ ಮಾರ್ಗದರ್ಶನದಲ್ಲಿ ತರಬೇತಿ ಪಡೆದ ಆಟಗಾರರು ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಟೂರ್ನಿ, ಧಾರವಾಡ ವಿಶ್ವವಿದ್ಯಾಲಯ ಮತ್ತು ಕೆಎಸ್‌ಸಿಎ ಧಾರವಾಡ ವಲಯ ಮಟ್ಟದ ಟೂರ್ನಿಗಳಲ್ಲಿ ಆಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.