
ಪ್ರಜಾವಾಣಿ ವಾರ್ತೆ
ಬೆಂಗಳೂರು: ಪಿಇಎಸ್ ವಿಶ್ವವಿದ್ಯಾಲಯದ ಎಂಬಿಎ ಎರಡನೇ ವರ್ಷದ ವಿದ್ಯಾರ್ಥಿ ನವೀನ್ ವೆಂಕಟೇಶ್ ಅವರು ಇತ್ತೀಚೆಗೆ ಹೈದರಾಬಾದಿನ ಗಚ್ಚಿಬೌಲಿಯಲ್ಲಿ ನಡೆದ 25ನೇ ರಾಷ್ಟ್ರೀಯ ಪ್ಯಾರಾ ಈಜು ಚಾಂಪಿಯನ್‌ಷಿಪ್‌ನಲ್ಲಿ ಒಂದು ಚಿನ್ನ, ಒಂದು ಬೆಳ್ಳಿ, ಒಂದು ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
200 ಮೀಟರ್ ವೈಯಕ್ತಿಕ ಮೆಡ್ಲೆಯಲ್ಲಿ ಚಿನ್ನ, 100 ಮೀಟರ್ ಬಟರ್‌ಫ್ಲೈ ಸ್ಪರ್ಧೆಯಲ್ಲಿ ಬೆಳ್ಳಿ ಮತ್ತು 50 ಮೀಟರ್ ಬಟರ್‌ಫ್ಲೈ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.
ಪಿಇಎಸ್ ವಿಶ್ವವಿದ್ಯಾಲಯದ ಕುಲಾಧಿಪತಿ ಪ್ರೊ. ಜವಾಹರ್ ದೊರೆಸ್ವಾಮಿ ಮತ್ತು
ಕುಲಪತಿ ಪ್ರೊ. ಜೆ. ಸೂರ್ಯಪ್ರಸಾದ್ ಅವರು ನವೀನ್ ಅವರನ್ನು ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.