ADVERTISEMENT

ಪಿಬಿಎಲ್: ಬೆಂಗಳೂರಿನ ಪಂದ್ಯಗಳು ಸ್ಥಳಾಂತರ

ಪಿಟಿಐ
Published 10 ಜನವರಿ 2020, 15:37 IST
Last Updated 10 ಜನವರಿ 2020, 15:37 IST

ಬೆಂಗಳೂರು:ಪ್ರೀಮಿಯರ್‌ ಬ್ಯಾಡ್ಮಿಂಟನ್‌ ಲೀಗ್‌ (ಪಿಬಿಎಲ್‌) ಐದನೇ ಆವೃತ್ತಿಯ ಅಂತಿಮ ಲೆಗ್‌ನ ಪಂದ್ಯಗಳನ್ನು ಬೆಂಗಳೂರಿನಿಂದ ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿದೆ.

ನಿಗದಿತ ದಿನಗಳಂದು ಕಂಠೀರವ ಕ್ರೀಡಾಂಗಣ ಲಭ್ಯವಿಲ್ಲದ ಕಾರಣ‌ ಪಂದ್ಯಗಳನ್ನು ಆಯೋಜಿಸಲು ಸಾಧ್ಯವಾಗುತ್ತಿಲ್ಲ ಎಂದು ಬೆಂಗಳೂರು ರ‍್ಯಾಪ್ಟರ್ಸ್‌ ಫ್ರಾಂಚೈಸ್‌ ಶುಕ್ರವಾರ ಆಯೋಜಕರಿಗೆ ತಿಳಿಸಿದೆ.

‘ಮೊದಲು ಪ್ರಕಟಿಸಿದ್ದ ವೇಳಾಪಟ್ಟಿಯ ಪ್ರಕಾರ ಬೆಂಗಳೂರಿನಲ್ಲಿ ಫೆಬ್ರುವರಿ 5ರಿಂದ 9ರವರೆಗೆ ಎರಡು ಲೀಗ್‌, ಎರಡು ಸೆಮಿಫೈನಲ್‌ ಮತ್ತು ಫೈನಲ್‌ ಪಂದ್ಯಗಳು ನಡೆಯಬೇಕಿತ್ತು. ಕ್ರೀಡಾಂಗಣ ಲಭ್ಯವಿಲ್ಲದ ಕಾರಣ ಪಂದ್ಯಗಳನ್ನು ಹೈದರಾಬಾದ್‌ಗೆ ಸ್ಥಳಾಂತರಿಸಲಾಗಿದೆ’ ಎಂದು ಪಿಬಿಎಲ್‌ ಆಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಹೊಸ ವೇಳಾಪಟ್ಟಿಯ ಪ್ರಕಾರ ಹೈದರಾಬಾದ್‌ನಲ್ಲಿ ಇದೇ ತಿಂಗಳ 29ರಿಂದ ಫೆಬ್ರುವರಿ 9ರ ಅವಧಿಯಲ್ಲಿ ಒಟ್ಟು 15 ಪಂದ್ಯಗಳು ಆಯೋಜನೆಯಾಗಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.