ಪ್ರಾಗ್: ಭಾರತದ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ ಅವರು ಪ್ರಾಗ್ ಮಾಸ್ಟರ್ಸ್ ಚೆಸ್ ಟೂರ್ನಿಯ ಮೊದಲ ಸುತ್ತಿನಲ್ಲಿ ಸ್ಥಳೀಯ (ಝೆಕ್ ರಿಪಬ್ಲಿಕ್) ತಾರೆ ಡೇವಿಡ್ ನವಾರ ಅವರನ್ನು ಎದುರಿಸಲಿದ್ದಾರೆ.
ಎರಡನೇ ಶ್ರೇಯಾಂಕದಪ್ರಜ್ಞಾನಂದ ಅವರು ಗುರುವಾರ ಆರಂಭವಾಗುವ ಈ ಟೂರ್ನಿಯನ್ನು ಗೆಲ್ಲುವ ನೆಚ್ಚಿನ ಆಟಗಾರ ಎನಿಸಿದ್ದು, ಮೊದಲ ಸುತ್ತಿನಲ್ಲಿ ಬಿಳಿ ಕಾಯಿಗಳಲ್ಲಿ ಆಡಲಿದ್ದಾರೆ. ನವಾರ ಅವರು ದೀರ್ಘ ಕಾಲದಿಂದ ಯುರೋಪಿನ ಪ್ರಮುಖ ಆಟಗಾರರಾಗಿ ಗುರುತಿಸಿಕೊಂಡಿದ್ದಾರೆ.
ಈ ಟೂರ್ನಿಯಲ್ಲಿ ಹತ್ತು ಆಟಗಾರರು ಭಾಗವಹಿಸಲಿದ್ದು, 9 ಸುತ್ತುಗಳಿವೆ. ಎದುರಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.