ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡು ತವರಿಗೆ ಮರಳಿರುವ ಭಾರತ ತಂಡದ ಸದಸ್ಯರಿಗೆ ಚಹಾಕೂಟ ಏರ್ಪಡಿಸಿದ್ದಾರೆ.
‘ರಾಷ್ಟ್ರಪತಿ ಭವನದ ಸಾಂಸ್ಕೃತಿಕ ಕೇಂದ್ರದಲ್ಲಿ ಇದೇ 14ರಂದು ಚಹಾಕೂಟ ಹಮ್ಮಿಕೊಳ್ಳಲಾಗಿದೆ’ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ಭಾರತದ ಕ್ರೀಡಾಪಟುಗಳು ಈ ಬಾರಿಯ ಕೂಟದಲ್ಲಿ ಏಳು ಪದಕಗಳನ್ನು ಗೆದ್ದಿದ್ದರು. ಇದು ಒಲಿಂಪಿಕ್ಸ್‌ನಲ್ಲಿ ಭಾರತದ ಶ್ರೇಷ್ಠ ಸಾಧನೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.