ADVERTISEMENT

ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ಅಪಘಾತದಲ್ಲಿ ಸಾವು

ಪಿಟಿಐ
Published 18 ಏಪ್ರಿಲ್ 2022, 4:33 IST
Last Updated 18 ಏಪ್ರಿಲ್ 2022, 4:33 IST
ವಿಶ್ವ ದೀನದಯಾಳನ್ –ಟ್ವಿಟರ್ ಚಿತ್ರ
ವಿಶ್ವ ದೀನದಯಾಳನ್ –ಟ್ವಿಟರ್ ಚಿತ್ರ   

ಶಿಲಾಂಗ್: ತಮಿಳುನಾಡಿನ ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ರಸ್ತೆ ಅಪಘಾತದಲ್ಲಿ ಭಾನುವಾರ ಸಾವಿಗೀಡಾಗಿದ್ದಾರೆ. ಶಿಲಾಂಗ್‌ನಲ್ಲಿ ನಡೆಯಲಿರುವ ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿತ್ತು.

18 ವರ್ಷದ ವಿಶ್ವ ಅವರು ತಂಡದ ಮೂವರು ಆಟಗಾರರ ಜೊತೆ ಗುವಾಹಟಿಯಿಂದ ಶಿಲಾಂಗ್‌ಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಮುಂಭಾಗದಿಂದ ಬಂದ 12 ಚಕ್ರಗಳ ಟ್ರೇಲರ್, ರಸ್ತೆ ವಿಭಜಕಕ್ಕೆ ಗುದ್ದಿ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದು, ವಿಶ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ರಮೇಶ್ ಸಂತೋಷ್ ಕುಮಾರ್, ಅವಿನಾಶ್ ಪ್ರಸನ್ನಜಿ ಮತ್ತು ಕಿಶೋರ್ ಕುಮಾರ್ ಗಂಭೀರ ಗಾಯಗೊಂಡಿದ್ದಾರೆ ಎಂದು ಭಾರತ ಟೇಬಲ್ ಟೆನಿಸ್ ಫೆಡರೇಷನ್ ತಿಳಿಸಿದೆ.

ರಾಷ್ಟ್ರೀಯ ಟೂರ್ನಿಗಳಲ್ಲಿ ಪ್ರಶಸ್ತಿಗಳನ್ನು ಗೆದ್ದುಕೊಂಡಿರುವ ವಿಶ್ವ ಅವರು ಅಂತರರಾಷ್ಟ್ರೀಯ ಟೂರ್ನಿಗಳಲ್ಲೂ ಪದಕ ಗಳಿಸಿದ್ದಾರೆ. ಇದೇ 27ರಿಂದ ಆಸ್ಟ್ರಿಯಾದ ಲಿನ್ಜ್‌ನಲ್ಲಿ ನಡೆಯಲಿರುವ ಡಬ್ಲ್ಯುಟಿಟಿ ಯೂತ್ ಕಂಟೆಂಡರ್‌ನಲ್ಲಿ ಅವರು ಪಾಲ್ಗೊಳ್ಳಬೇಕಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.