ಪಿ.ವಿ.ಸಿಂಧು
ಶೆಂಜೆನ್ (ಚೀನಾ): ಚೀನಾ ಮಾಸ್ಟರ್ಸ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯ ಕ್ವಾರ್ಟರ್ ಫೈನಲ್‌ನಲ್ಲಿ ಸೋಲು ಅನುಭವಿಸಿರುವ ಭಾರತದ ಅಗ್ರ ಆಟಗಾರ್ತಿ ಪಿ.ವಿ.ಸಿಂಧು ಕೂಟದಿಂದಲೇ ನಿರ್ಗಮಿಸಿದ್ದಾರೆ.
ಮಹಿಳಾ ಸಿಂಗಲ್ಸ್ ಕ್ವಾರ್ಟರ್ ಫೈನಲ್‌ನಲ್ಲಿ ಸಿಂಧು ಅವರು ವಿಶ್ವ ನಂ.1 ಆಟಗಾರ್ತಿ ಕೊರಿಯಾದ ಆ್ಯನ್ ಸೆ ಯಂಗ್ ವಿರುದ್ಧ 14-21 13-21ರ ಅಂತರದಲ್ಲಿ ಸೋಲು ಅನುಭವಿಸಿದ್ದಾರೆ.
ಪ್ಯಾರಿಸ್ ಒಲಿಂಪಿಕ್ಸ್ ಚಿನ್ನ ವಿಜೇತೆ 23 ವರ್ಷದ ಆ್ಯನ್ ಸೆ ಯಂಗ್ ಅವರು 38 ನಿಮಿಷಗಳಲ್ಲೇ ಪಂದ್ಯ ವಶಪಡಿಸಿಕೊಂಡಿದ್ದಾರೆ.
ಇದು ಆ್ಯನ್ ಸೆ ಯಂಗ್ ವಿರುದ್ಧ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಸಿಂಧು ಅವರಿಗೆ ಎದುರಾದ ಸತತ ಎಂಟನೇ ಸೋಲು ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.