ADVERTISEMENT

ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ಗೆ ರಕ್ಷಿತಾರಾಜು ಆಯ್ಕೆ

​ಪ್ರಜಾವಾಣಿ ವಾರ್ತೆ
Published 7 ಜೂನ್ 2023, 16:19 IST
Last Updated 7 ಜೂನ್ 2023, 16:19 IST
ರಕ್ಷಿತಾರಾಜು
ರಕ್ಷಿತಾರಾಜು   

ಕೊಟ್ಟಿಗೆಹಾರ (ಚಿಕ್ಕಮಗಳೂರು ಜಿಲ್ಲೆ): ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಜುಲೈ 5ರಿಂದ 18ರ ವರೆಗೆ ನಡೆಯಲಿರುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನ ಟಿ–11 ವಿಭಾಗದ 1,500 ಮೀಟರ್ಸ್ ಓಟದ ಸ್ಪರ್ಧೆಗೆ ಮೂಡಿಗೆರೆ ತಾಲ್ಲೂಕು ಬಾಳೂರಿನ ಗುಡ್ನಳ್ಳಿ ಗ್ರಾಮದ ಅಂಧ ಕ್ರೀಡಾಪಟು ರಕ್ಷಿತಾ ರಾಜು ಆಯ್ಕೆಯಾಗಿದ್ದಾರೆ.

ಈ ವರ್ಷದ ಫೆಬ್ರುವರಿಯಲ್ಲಿ ದುಬೈಯಲ್ಲಿ ನಡೆದ ಶಾರ್ಜಾ ಅಂತರರಾಷ್ಟ್ರೀಯ ಮುಕ್ತ ಪ್ಯಾರಾ ಅಥ್ಲೆಟಿಕ್ಸ್‌ನ 1,500 ಮೀ ಓಟದಲ್ಲಿ ಬೆಳ್ಳಿ ಪದಕ ಗಳಿಸಿದ್ದ ರಕ್ಷಿತಾ ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ ಅಂತರರಾಷ್ಟ್ರೀಯ ಮುಕ್ತ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನ 1,500 ಮೀಟರ್ಸ್ ಓಟದಲ್ಲಿ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಕಳೆದ ವರ್ಷ ನವದೆಹಲಿಯಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಷಿಪ್‌ನ 400, 800 ಹಾಗೂ 1500ಮೀಟರ್ಸ್ ಓಟದಲ್ಲಿ ಚಿನ್ನದ ಪದಕ ಗಳಿಸಿದ್ದು ಪುಣೆಯಲ್ಲಿ ನಡೆದ ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್‌ ಚಾಂಪಿಯನ್‌ಷಿಪ್‌ನ 400 ಹಾಗೂ 1500ಮೀ ಓಟದಲ್ಲಿ ಚಿನ್ನ ಗೆದ್ದುಕೊಂಡಿದ್ದರು.

‘ರಕ್ಷಿತಾ ರಾಜು ಅವರಿಗೆ ‘ಗೈಡ್ ರನ್ನರ್’ ಆಗಿ ತಬರೇಶ್ ಹಾಗೂ ಸೌಮ್ಯಾ ನೆರವು ನೀಡುತ್ತಿದ್ದಾರೆ. ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ರಕ್ಷಿತಾ ಪದಕ ಗೆಲ್ಲುವ ವಿಶ್ವಾಸವಿದೆ. ಅಕ್ಟೋಬರ್‌ನಲ್ಲಿ ಚೀನಾದಲ್ಲಿ ನಡೆಯಲಿರುವ ಪ್ಯಾರಾ ಏಷ್ಯನ್‌ ಗೇಮ್ಸ್‌ಗೂ ಆಯ್ಕೆಯಾಗಿದ್ದಾರೆ' ಎಂದು ಕೋಚ್‌ ರಾಹುಲ್ ಬಾಲಕೃಷ್ಣ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ಪ್ರಾಥಮಿಕ ಶಿಕ್ಷಣವನ್ನು ಚಿಕ್ಕಮಗಳೂರಿನ ಕೆಂಪನಹಳ್ಳಿ ಆಶಾಕಿರಣ ಶಾಲೆಯಲ್ಲಿ ಮುಗಿಸಿದ ರಕ್ಷಿತಾ ಸದ್ಯ ಬೆಂಗಳೂರಿನ ಕ್ರೀಡಾ ವಸತಿನಿಲಯದಲ್ಲಿದ್ದು ಪಿಯುಸಿ ವಿದ್ಯಾರ್ಥಿನಿಯಾಗಿದ್ದಾರೆ ಎಂದು ಅವರು ವಿವರಿಸಿದರು.

ಕೋಚ್ ರಾಹುಲ್ ಬಾಲಕೃಷ್ಣ ಹಾಗೂ ಗೈಡ್ ರನ್ನರ್ ತಬರೀಶ್ ಜತೆ ರಕ್ಷಿತಾರಾಜು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.