ADVERTISEMENT

ಕ್ರೀಡಾಂಗಣ ಹಸಿರೀಕರಣಕ್ಕೆ ಒತ್ತು

ಕೇಂದ್ರ ನೂತನ ಕ್ರೀಡಾ ಸಚಿವ ಕಿರಣ್‌ ರಿಜಿಜು ಭರವಸೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2019, 19:06 IST
Last Updated 5 ಜೂನ್ 2019, 19:06 IST
ಮಂಗಳವಾರ ನವದೆಹಲಿಯ ಇಂದಿರಾಗಾಂಧಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದ ಕ್ರೀಡಾ ಸಚಿವ ಕಿರಣ್‌ ರಿಜಿಜು– ಪಿಟಿಐ ಚಿತ್ರ
ಮಂಗಳವಾರ ನವದೆಹಲಿಯ ಇಂದಿರಾಗಾಂಧಿ ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದ ಕ್ರೀಡಾ ಸಚಿವ ಕಿರಣ್‌ ರಿಜಿಜು– ಪಿಟಿಐ ಚಿತ್ರ   

ನವದೆಹಲಿ (ಪಿಟಿಐ): ಭಾರತೀಯ ಕ್ರೀಡಾ ಪ್ರಾಧಿಕಾರದ ಎಲ್ಲ ಕ್ರೀಡಾಂಗಣಗಳು ಹಾಗೂ ಅಕಾಡೆಮಿಗಳನ್ನು ಪರಿಸರ ಸ್ನೇಹಿಯಾಗಿಸುವುದಾಗಿ ಕೇಂದ್ರದ ನೂತನ ಕ್ರೀಡಾ ಸಚಿವ ಕಿರಣ್‌ ರಿಜಿಜು ಭರವಸೆ ನೀಡಿದರು.

ವಿಶ್ವ ಪರಿಸರ ದಿನದ ಅಂಗವಾಗಿ ಅಶೋಕ ಸಸಿಗಳನ್ನು ನೆಟ್ಟ ಅವರು, ಹಸಿರು ಪರಿಸರಕ್ಕೆ ಬೆಂಬಲ ನೀಡುವ ವಾಗ್ದಾನ ಮಾಡಿದರು.

‘ಇದೊಂದು ಆರಂಭದ ಹೆಜ್ಜೆ ಮಾತ್ರ. ಕ್ರೀಡಾ ಪ್ರಾಧಿಕಾರದ ಎಲ್ಲ ಅಂಗಣಗಳುಹಾಗೂ ಅಕಾಡೆಮಿಗಳಲ್ಲಿ ಹೆಚ್ಚು ಗಿಡಗಳನ್ನು ಬೆಳೆಸಬೇಕಾಗಿದೆ. ಎಲ್ಲ ಸಂಸ್ಥೆಗಳು ಪರಿಸರ ಸ್ನೇಹಿಯಾಗಬೇಕು’ ಎಂದು ಹೇಳಿದರು.

ADVERTISEMENT

ಜವಾಹರಲಾಲ್‌ ನೆಹರೂ ಕ್ರೀಡಾಂಗಣಕ್ಕೆ ತೆರಳಿದ ಅವರು ಅಥ್ಲೀಟ್‌ಗಳನ್ನು ಭೇಟಿ ಮಾಡಿ, ಅವರಿಗೆ ಸಿಗುತ್ತಿರುವ ತರಬೇತಿ ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.