ಟೋಕಿಯೊ: ಪಾಂಡಾ ಸಹೋದರಿಯಾದ ಋತುಪರ್ಣ– ಶ್ವೇತಪರ್ಣ ಅವರು ಇಲ್ಲಿ ಮಂಗಳವಾರ ಆರಂಭವಾದ ಜಪಾನ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಡಬಲ್ಸ್‌ನಲ್ಲಿ ಮೊದಲ ಸುತ್ತಿನಲ್ಲೇ ಹೊರಬಿದ್ದರು.
ವಿಶ್ವ ರ‍್ಯಾಂಕಿಂಗ್‌ನಲ್ಲಿ 39ನೇ ಸ್ಥಾನದಲ್ಲಿರುವ ಭಾರತದ ಜೋಡಿಯು 13–21, 7–21ರಿಂದ ಆತಿಥೇಯ ದೇಶದ ಕೊಕೊನಾ ಇಶಿಕಾವಾ ಮತ್ತು ಮೈಕೊ ಕವಾಜೊ ಅವರಿಗೆ ಹೆಚ್ಚಿನ ಪ್ರತಿರೋಧ ತೋರದೆ ಮಣಿಯಿತು.
ಮಹಿಳೆಯರ ಸಿಂಗಲ್ಸ್‌ನಲ್ಲಿ ಪಿ.ವಿ. ಸಿಂಧು, ಪುರುಷರ ಸಿಂಗಲ್ಸ್‌ನಲ್ಲಿ ಲಕ್ಷ್ಮಸೇನ್ ಮತ್ತು ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಬುಧವಾರ ಅಭಿಯಾನ ಆರಂಭಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.