

ಸುಶೀಲ್ ಕುಮಾರ್
ನವದೆಹಲಿ: ಇಲ್ಲಿನ ಛತ್ರಸಾಲ್ ಕ್ರೀಡಾಂಗಣದಲ್ಲಿ ಮಾಜಿ ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಅವರ ಕೊಲೆ ಪ್ರಕರಣ ಸಂಬಂಧ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿಯ ರೋಹಿಣಿ ನ್ಯಾಯಾಲಯ ವಜಾಗೊಳಿಸಿದೆ.
2025ರ ಮಾರ್ಚ್ 4ರಂದು ದೆಹಲಿ ಹೈಕೋರ್ಟ್ ಸುಶೀಲ್‌ಗೆ ತಾತ್ಕಾಲಿಕವಾಗಿ ಜಾಮೀನು ಮಂಜೂರು ಮಾಡಿತ್ತು. ಆಗಸ್ಟ್ 13ರಂದು ಸುಶೀಲ್ ಕುಮಾರ್ ಅವರಿಗೆ ನೀಡಲಾಗಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿತ್ತು.
2021ರ ಮೇ 4ರಂದು ಸಾಗರ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪ ಸುಶೀಲ್ ಕುಮಾರ್ ಮತ್ತು ಇತರರ ಮೇಲೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.