ಬೆಂಗಳೂರು: ಕೋವಿಡ್‌ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಮಾಜಿ ಅಂತರರಾಷ್ಟ್ರೀಯ ಕ್ರೀಡಾಪಟುಗಳು ಮತ್ತು ಕೋಚ್‌ಗಳಿಗೆ ನೆರವಾಗಲು ಭಾರತ ಕ್ರೀಡಾ ಪ್ರಾಧಿಕಾರವು (ಸಾಯ್) ಭಾರತ ಒಲಿಂಪಿಕ್ ಸಂಸ್ಥೆಯ (ಐಒಎ) ಜೊತೆಗೂಡಿ ತಂಡವೊಂದನ್ನು ಕಟ್ಟಲು ಮುಂದಾಗಿದೆ.
ಶುಕ್ರವಾರ ರಚಿಸಲಾಗಿರುವ ತಂಡದಲ್ಲಿ ಸಾಯ್ ಮಹಾನಿರ್ದೇಶಕ ಸಂದೀಪ್ ಪ್ರಧಾನ್, ಐಒಎ ಅಧ್ಯಕ್ಷ ನರಿಂದರ್ ಬಾತ್ರಾ, ಮಹಾಕಾರ್ಯದರ್ಶಿ ರಾಜೀವ್ ಮೆಹ್ತಾ, ಭಾರತ ಪ್ಯಾರಾಲಿಂಪಿಕ್ ಸಮಿತಿಯ ಅಧ್ಯಕ್ಷೆ ದೀಪಾ ಮಲಿಕ್, ಕ್ರೀಡಾ ಸಚಿವಾಲಯದ ನಿರ್ದೇಶಕ ವಿಜಯ ಕುಮಾರ್, ಖೇಲೊ ಇಂಡಿಯಾ ಹಿರಿಯ ನಿರ್ದೇಶಕ ಸತ್ಯನಾರಾಯನ್ ಮೀನಾ, ಸಾಯ್ ಸಂಯೋಜಕಿ ರಾಧಿಕಾ ಶ್ರೀಮಾನ್, ಟಾರ್ಗೆಟ್ ಒಲಿಂಪಿಕ್ ಪೋಡಿಯಂ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಶ್ ರಾಜಗೋಪಾಲನ್ ಇದ್ದಾರೆ.
ರಾಜ್ಯ ಮಟ್ಟದಲ್ಲಿ ಆಯೋಜಿಸುವ ಯೋಜನೆಗಳನ್ನು ಈ ಸಮಿತಿ ಜಾರಿಗೆ ತರಲಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.