ADVERTISEMENT

ವಿಚ್ಛೇದನ ಘೋಷಿಸಿದ ಸೈನಾ–ಕಶ್ಯಪ್‌ ದಂಪತಿ

​ಪ್ರಜಾವಾಣಿ ವಾರ್ತೆ
Published 14 ಜುಲೈ 2025, 1:41 IST
Last Updated 14 ಜುಲೈ 2025, 1:41 IST
ಸೈನಾ ನೆಹ್ವಾಲ್ -ಪಿಟಿಐ ಚಿತ್ರ
ಸೈನಾ ನೆಹ್ವಾಲ್ -ಪಿಟಿಐ ಚಿತ್ರ   

ನವದೆಹಲಿ: ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಮತ್ತು ಪರುಪಳ್ಳಿ ಕಶ್ಯಪ್ ದಂಪತಿ ಪರಸ್ಪರ ಬೇರ್ಪಡುವ ನಿರ್ಧಾರವನ್ನು ಭಾನುವಾರ ಪ್ರಕಟಿಸಿದ್ದಾರೆ.

35 ವರ್ಷ ವಯಸ್ಸಿನ ಸೈನಾ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. 2018ರಲ್ಲಿ ಸೈನಾ ಅವರು ಬ್ಯಾಡ್ಮಿಂಟನ್‌ ಆಟಗಾರನಾಗಿದ್ದ ಕಶ್ಯಪ್ ಅವರನ್ನು ವರಿಸಿದ್ದರು.

‘ಜೀವನವು ಕೆಲವೊಮ್ಮೆ ನಮ್ಮನ್ನು ವಿಭಿನ್ನ ದಿಕ್ಕುಗಳಲ್ಲಿ ಕರೆದೊಯ್ಯುತ್ತದೆ. ಸಾಕಷ್ಟು ಯೋಚಿಸಿ ಕಶ್ಯಪ್ ಮತ್ತು ನಾನು ಬೇರೆಯಾಗಲು ನಿರ್ಧರಿಸಿದ್ದೇವೆ. ನಮ್ಮ ಖಾಸಗಿತನವನ್ನು ಗೌರವಿಸುತ್ತೀರಿ ಎಂದು ಭಾವಿಸುವೆ’ ಎಂದು ಸೈನಾ ಬರೆದುಕೊಂಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.