ನವದೆಹಲಿ: ಭಾರತದ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಪತಿ ಪರುಪಳ್ಳಿ ಕಶ್ಯಪ್ ಅವರಿಂದ ಬೇರ್ಪಡುವ ನಿರ್ಧಾರದಿಂದ ಹಿಂದೆಸರಿದಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ ತಮ್ಮ ಸಂಬಂಧ ಮುಂದುವರೆಸುವುದಾಗಿ ಹೇಳಿಕೊಂಡಿದ್ದಾರೆ.
ನಿಸರ್ಗದ ಮಡಿಲಲ್ಲಿ ಕಶ್ಯಪ್ ಜೊತೆಗಿರುವ ಫೋಟೊವನ್ನು ಹಂಚಿಕೊಂಡಿರುವ ಸೈನಾ, ‘ಕೆಲವೊಮ್ಮೆ ದೂರವಾದಾಗಲೇ ಜನರ ಮಹತ್ವ ಅರಿವಾಗುತ್ತದೆ. ನಾವಿಬ್ಬರೂ ಮತ್ತೊಮ್ಮೆ ಪ್ರಯತ್ನಿಸುತ್ತಿದ್ದೇವೆ' ಎಂದು ಬರೆದುಕೊಂಡಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.
ಪರುಪಳ್ಳಿ ಕಶ್ಯಪ್ ಅವರಿಂದ ಬೇರ್ಪಡುವ ನಿರ್ಧಾರವನ್ನು ಜುಲೈ 13ರಂದು ಸೈನಾ ಪ್ರಕಟಿಸಿದ್ದರು. ಇದಾದ ಕೇವಲ 19 ದಿನಗಳ ಅಂತರದಲ್ಲಿ ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
35 ವರ್ಷ ವಯಸ್ಸಿನ ಸೈನಾ ಅವರು 2018ರಲ್ಲಿ ಬ್ಯಾಡ್ಮಿಂಟನ್ ಆಟಗಾರನಾಗಿದ್ದ ಕಶ್ಯಪ್ ಅವರನ್ನು ವರಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.