ಅಸ್ತಾನ (ಕಜಕಸ್ತಾನ): ಭಾರತದ ಸಾಯಿರಾಜ್ ಪರ್ದೇಶಿ ಅವರು ಇಲ್ಲಿ ನಡೆದ ಏಷ್ಯನ್ ಜೂನಿಯರ್ (ಪುರುಷ ಮತ್ತು ಮಹಿಳಾ) ವೇಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದರು.
ಮಹಾರಾಷ್ಟ್ರದ 18 ವರ್ಷ ವಯಸ್ಸಿನ ಸಾಯಿರಾಜ್ ಅವರು ಪುರುಷರ 86 ಕೆ.ಜಿ ವಿಭಾಗದಲ್ಲಿ ಈ ಸಾಧನೆ ಮಾಡಿದರು. ಸ್ನ್ಯಾಚ್‌ನಲ್ಲಿ 152 ಕೆ.ಜಿ ಮತ್ತು ಕ್ಲೀನ್ ಹಾಗೂ ಜರ್ಕ್‌ನಲ್ಲಿ 186 ಕೆ.ಜಿ ಸೇರಿದಂತೆ ಒಟ್ಟು 338 ಕೆಜಿ ಭಾರ ಎತ್ತಿದರು.
ಕಳೆದ ವರ್ಷ ಖೇಲೊ ಇಂಡಿಯಾ ಯೂತ್ ಗೇಮ್ಸ್‌ನಲ್ಲಿ 81 ಕೆ.ಜಿ ವಿಭಾಗದಲ್ಲಿ ಚಿನ್ನ ಗೆಲ್ಲುವ ಹಾದಿಯಲ್ಲಿ ಅವರು ಮೂರು ಯೂತ್ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದರು.
ದೋಹಾದಲ್ಲಿ ನಡೆದ 2024ರ ಏಷ್ಯನ್ ಯೂತ್ ಮತ್ತು ಜೂನಿಯರ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಸಾಯಿರಾಜ್ ಅವರು ಚಿನ್ನದ ಪದಕ ಗೆದ್ದಿದ್ದರು. ಕಳೆದ ವರ್ಷ ಮೇ ತಿಂಗಳಲ್ಲಿ ನಡೆದ ಐಡಬ್ಲ್ಯುಎಫ್ ವಿಶ್ವ ಯುವ ಚಾಂಪಿಯನ್‌ಷಿಪ್‌ನಲ್ಲಿ ನಾಲ್ಕನೇ ಸ್ಥಾನ ಗಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.