ADVERTISEMENT

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ: ಬೆಳ್ಳಿ ಗೆದ್ದ ಸಂಕೇತ್

​ಪ್ರಜಾವಾಣಿ ವಾರ್ತೆ
Published 30 ಜುಲೈ 2022, 12:42 IST
Last Updated 30 ಜುಲೈ 2022, 12:42 IST
ಸಂಕೇತ್ ಸರ್ಗರ್
ಸಂಕೇತ್ ಸರ್ಗರ್   

ಬರ್ಮಿಂಗ್‌ಹ್ಯಾಮ್: ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಗೇಮ್ಸ್‌ 2022 ಕ್ರೀಡಾಕೂಟದಲ್ಲಿ ಭಾರತಕ್ಕೆ ಮೊದಲ ಪದಕ ಸಂದಿದೆ.

ಶನಿವಾರ ನಡೆದ ಪುರುಷರ 55 ಕೆ.ಜಿ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತದ ಸಂಕೇತ್ ಸರ್ಗರ್ ಬೆಳ್ಳಿ ಪದಕ ಗೆದ್ದಿದ್ದಾರೆ.

ಇದೇ ವಿಭಾಗದಲ್ಲಿ ಮಲೇಷ್ಯಾದ ಮಹಮ್ಮದ್ ಹನಿಕ್ ಅವರು ಚಿನ್ನ ಗೆದ್ದರೆ, ಶ್ರೀಲಂಕಾದ ದಿಲಂಕಾ ಇಸೂರು ಕುಮಾರ್ ಅವರು ಕಂಚಿನ ಪದಕ ಗೆದ್ದರು.

ADVERTISEMENT

ಮಹಾರಾಷ್ಟ್ರದ ಸಾಂಗ್ಲಿ ಮೂಲದ ಸಂಕೇತ್ ಅವರು ಸ್ವಲ್ಪದರಲ್ಲೇ ಚಿನ್ನದ ಪದಕದಿಂದವಂಚಿತರಾದರು. ಸಂಕೇತ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು–ಅಭಿನಂದಿಸಿದ್ದಾರೆ.

‘ಬ್ರಿಟಿಷರ ವಿರುದ್ಧಸ್ವಾತಂತ್ರ್ಯಹೋರಾಟದಲ್ಲಿ ಮಡಿದ ಭಾರತೀಯರಿಗೆ ಪದಕವನ್ನು ಸಮರ್ಪಿಸುತ್ತೇನೆ’ ಎಂದು ಸಂಕೇತ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.