ಟೋಕಿಯೊ: ದೇಶದ ಅಗ್ರಮಾನ್ಯ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ– ಚಿರಾಗ್ ಶೆಟ್ಟಿ, ಮಂಗಳವಾರ ಆರಂಭವಾಗಲಿರುವ ಜಪಾನ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನದ ವಿಶ್ವಾಸದಲ್ಲಿದ್ದಾರೆ.
ವಿಶ್ವ ರ್‍ಯಾಂಕಿಂಗ್‌ನಲ್ಲಿ 15ನೇ ಸ್ಥಾನದಲ್ಲಿರುವ ಸಾತ್ವಿಕ್– ಚಿರಾಗ್ ಜೋಡಿಯು ದಕ್ಷಿಣ ಕೊರಿಯಾದ ಕಾಂಗ್ ಮಿನ್ ಹ್ಯೂಕ್– ಕಿ ಡಾಂಗ್ ಜು ವಿರುದ್ಧ ಅಭಿಯಾನ ಆರಂಭಿಸಲಿದೆ.
ಲಕ್ಷ್ಯ ಸೇನ್ ಅವರು ಲಯಕ್ಕೆ ಮರಳುವ ವಿಶ್ವಾಸದಲ್ಲಿದ್ದಾರೆ. 23 ವರ್ಷ ವಯಸ್ಸಿನ ಈ ಆಟಗಾರ ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ ಚೀನಾದ ವಾಂಗ್ ಜೆಂಗ್ ಶಿಂಗ್ ಎದುರು ಸೆಣಸಲಿದ್ದಾರೆ.
ವಿಶ್ವ ಕ್ರಮಾಂಕದಲ್ಲಿ 16ನೇ ಸ್ಥಾನದಲ್ಲಿರುವ ಪಿ.ವಿ. ಸಿಂಧೂ ಅವರೂ ಪ್ರಶಸ್ತಿಯ ದಾಹ ತೀರಿಸಿಕೊಳ್ಳಲು ಎದುರು ನೋಡುತ್ತಿದ್ದಾರೆ. ಅವರು, ಕೊರಿಯಾದ ಶಿಮ್ ಯು ಜಿನ್ ಎದುರು ಅಭಿಯಾನ ಆರಂಭಿಸುವರು.
ಇದೇ 20ರವರೆಗೆ ಟೋಕಿಯೊದಲ್ಲಿ ಟೂರ್ನಿ ನಡೆಯಲಿದ್ದು, ಒಟ್ಟು ಸುಮಾರು ₹8.16 ಕೋಟಿ ಬಹುಮಾನ ಮೊತ್ತವಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.