ಬ್ಯಾಡ್ಮಿಂಟನ್ (ಪ್ರಾತಿನಿಧಿಕ ಚಿತ್ರ)
ಜಕಾರ್ತ: ಇಲ್ಲಿ ನಡೆಯುತ್ತಿರುವ ಇಂಡೊನೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಎರಡನೇ ಸುತ್ತಿನಲ್ಲೇ ಭಾರತದ ಆಟಗಾರರ ಸವಾಲು ಅಂತ್ಯಗೊಂಡಿದೆ.
ಪುರುಷರ ಸಿಂಗಲ್ಸ್‌ನ 16ರ ಘಟ್ಟದ ಪಂದ್ಯದಲ್ಲಿ ಗುರುವಾರ ಭಾರತದ ಲಕ್ಷ್ಮ ಸೇನ್ 16-21, 21-12, 21-23 ರಿಂದ ಜಪಾನ್‌ನ ಕೆಂಟಾ ನಿಶಿಮೊಟೊ ಅವರಿಗೆ ಮಣಿದರು.
ಪುರುಷರ ಡಬಲ್ಸ್‌ನ ಪ್ರಿ ಕ್ವಾರ್ಟರ್ ಫೈನಲ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು 20-22, 21-23ರಿಂದ ಥಾಯ್ಲೆಂಡ್‌ನ ಕಿಟ್ಟಿನುಪೊಂಗ್ ಕೆಡ್ರೆನ್ ಮತ್ತು ದೇಚಪೋಲ್ ಪುವರನುಕ್ರೋಹ್ ಅವರಿಗೆ ಶರಣಾದರು.
ಇದಕ್ಕೂ ಮೊದಲು ಧ್ರುವ ಕಪಿಲಾ ಮತ್ತು ತನಿಶಾ ಕ್ರಾಸ್ಟೊ ಜೋಡಿ ಮಿಶ್ರ ಡಬಲ್ಸ್‌ನಲ್ಲಿ ಹಾಗೂ ಅಶ್ವಿನಿ ಪೊನ್ನಪ್ಪ ಮತ್ತು ತನಿಶಾ ಜೋಡಿ ಮಹಿಳಾ ಡಬಲ್ಸ್‌ನಲ್ಲಿ ಪರಾಭವಗೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.