ಬೆಂಗಳೂರು: ಜಾವೆಲಿನ್ ಥ್ರೋಪಟು ಶಿವಂ ಲೋಹಕರೆ ಅವರು ಜಾಲಹಳ್ಳಿಯಲ್ಲಿ ಭಾನುವಾರ ನಡೆದ ಇಂಟರ್ ಸರ್ವೀಸಸ್ ಅಥ್ಲೆಟಿಕ್ಸ್ ಚಾಂಪಿಯನ್‌ಷಿಪ್‌ನಲ್ಲಿ ಕೂಟ ದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರು.
ಆರ್ಮಿ ರೆಡ್ ತಂಡವನ್ನು ಪ್ರತಿನಿಧಿಸಿದ 20 ವರ್ಷದ ಶಿವಂ (ಮಹಾರಾಷ್ಟ್ರ) ಅವರು 84.31 ಮೀಟರ್ ದೂರ ಈಟಿಯನ್ನು ಎಸೆದರು. ಈ ಮೂಲಕ ನೀರಜ್ ಚೋಪ್ರಾ (83.80 ಮೀ) ಹೆಸರಿನಲ್ಲಿದ್ದ ಕೂಟ ದಾಖಲೆಯನ್ನು ಅವರು ಮುರಿದರು. ಈ ಕೂಟವು ವಿಶ್ವ ಅಥ್ಲೆಟಿಕ್ಸ್‌ನಿಂದ ಮಾನ್ಯತೆ ಪಡೆಯದ ಕಾರಣ ವೈಯಕ್ತಿಕ ಶ್ರೇಷ್ಠ ದಾಖಲೆಗೆ ಪರಿಗಣಿಸುವುದಿಲ್ಲ.
ಕರ್ನಾಟಕದ ಮಣಿಕಂಠ ಹೋಬಳಿದಾರ್ ಅವರಿ ನಾಲ್ಕು ದಿನಗಳ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು. ಆರ್ಮಿ ರೆಡ್ ತಂಡವನ್ನು ಪ್ರತಿನಿಧಿಸಿದ ಅವರು 100 ಮೀ, 200 ಮೀ ಮತ್ತು 4x100 ಮೀ ರಿಲೆನಲ್ಲಿ ಸೇರಿ ಒಟ್ಟು ಮೂರು ಚಿನ್ನದ ಪದಕಗಳನ್ನು ಗೆದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.