ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಎರಡು ಕಂಚಿನ ಪದಕ ವಿಜೇತೆ ಮನು ಭಾಕರ್ ಅವರು ಬಿಬಿಸಿ ಇಂಡಿಯನ್ ಮಹಿಳಾ ಕ್ರೀಡಾಪಟು ಗೌರವಕ್ಕೆ ಪಾತ್ರವಾಗಿದ್ದಾರೆ.
ಈ ಪ್ರಶಸ್ತಿಯ ರೇಸ್‌ನಲ್ಲಿ ಮನು ಅವರೊಂದಿಗೆ ಗಾಲ್ಫ್ ಆಟಗಾರ್ತಿ ಅದಿತಿ ಅಶೋಕ್, ಪ್ಯಾರಾ ಶೂಟರ್ ಅವನಿ ಲೇಖರಾ, ಭಾರತ ಕ್ರಿಕೆಟ್ ತಂಡದ ಉಪ ನಾಯಕಿ ಸ್ಮೃತಿ ಮಂದಾನ ಮತ್ತು ಕುಸ್ತಿಪಟು ವಿನೇಶ್ ಫೋಗಾಟ್ ಇದ್ದರು. ಅಂತಿಮವಾಗಿ ಶೂಟರ್ ಮನು ಆಯ್ಕೆಯಾಗಿದ್ದಾರೆ.
22 ವರ್ಷ ವಯಸ್ಸಿನ ಮನು ಅವರು ಪ್ಯಾರಿಸ್‌ನಲ್ಲಿ 10 ಮೀಟರ್ ಏರ್ ಪಿಸ್ತೂಲ್ ವೈಯಕ್ತಿಕ ಸ್ಪರ್ಧೆ ಮತ್ತು ಮಿಶ್ರ ತಂಡ ಸ್ಪರ್ಧೆಯಲ್ಲಿ ಪದಕ ಗೆದ್ದಿದ್ದರು. ಈ ಮೂಲಕ ಸ್ವಾತಂತ್ರ್ಯ ನಂತರ ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಭಾರತದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.