ADVERTISEMENT

ವಿಶ್ವ ಶೂಟಿಂಗ್‌: ಇಶಾಗೆ ಕಂಚಿನ ಒದಕ

ಪಿಟಿಐ
Published 14 ನವೆಂಬರ್ 2025, 18:39 IST
Last Updated 14 ನವೆಂಬರ್ 2025, 18:39 IST
ಇಶಾ ಸಿಂಗ್‌
ಇಶಾ ಸಿಂಗ್‌   

ಕೈರೊ: ಭಾರತದ ಅನುಭವಿ ಶೂಟರ್‌ ಇಶಾ ಸಿಂಗ್‌ ಅವರು ಇಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ವಿಶ್ವ ಚಾಂಪಿಯನ್‌ಷಿಪ್‌ನ ಮಹಿಳೆಯರ 25 ಮೀ. ಸ್ಪೋರ್ಟ್‌ ಪಿಸ್ತೂಲ್‌ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದರು. ಆದರೆ, ಒಲಿಂಪಿಕ್ಸ್‌ ಅವಳಿ ಪದಕ ವಿಜೇತೆ ಮನು ಭಾಕರ್ ನಿರಾಸೆ ಮೂಡಿಸಿದರು.

26 ವರ್ಷದ ಇಶಾ ಅವರಿಗೆ ಇದು ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಮೊದಲ ವೈಯಕ್ತಿಕ ಪದಕವಾಗಿದೆ. ಶುಕ್ರವಾರ ಫೈನಲ್‌ ಸ್ಪರ್ಧೆಯಲ್ಲಿ 30 ಅಂಕಗಳೊಂದಿಗೆ ಇಶಾ ಮೂರನೇ ಸ್ಥಾನ ಗಳಿಸಿದರು. ಹಾಲಿ ಒಲಿಂಪಿಕ್‌ ಚಾಂಪಿಯನ್‌, ಕೊರಿಯಾದ ಯಾಂಗ್ ಜಿಯಿನ್ (40 ಅಂಕ) ಚಿನ್ನದ ಸಾಧನೆ ಮಾಡಿದರೆ, ಚೀನಾದ ಯಾವೋ ಕಿಯಾನ್ಕ್ಸನ್ (38) ಬೆಳ್ಳಿ ಪದಕ ತಮ್ಮದಾಗಿಸಿಕೊಂಡರು.

ಮೂರು ಚಿನ್ನ, ಐದು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕ ಗೆದ್ದ ಭಾರತ ಪದಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. 10 ಚಿನ್ನದೊಂದಿಗೆ 18 ಪದಕ ಗೆದ್ದಿರುವ ಚೀನಾ ಅಗ್ರಸ್ಥಾನದಲ್ಲಿದ್ದರೆ, ಕೊರಿಯಾ (6 ಚಿನ್ನದೊಂದಿಗೆ 11 ಪದಕ) ಎರಡನೇ ಸ್ಥಾನದಲ್ಲಿದೆ.

ADVERTISEMENT

ಗುರುವಾರ ನಡೆದಿದ್ದ ಅರ್ಹತಾ ಸುತ್ತಿನಲ್ಲಿ ಇಶಾ ಮತ್ತು ಮನು ಅವರು ಕ್ರಮವಾಗಿ ನಾಲ್ಕನೇ ಮತ್ತು ಏಳನೇ ಸ್ಥಾನದೊಂದಿಗೆ ಪದಕ ಸುತ್ತಿಗೆ ಮುನ್ನಡೆದಿದ್ದರು. ಫೈನಲ್‌ನಲ್ಲಿ ಮನು ಐದನೇ ಸ್ಥಾನದೊಂದಿಗೆ ಅಭಿಯಾನ ಮುಗಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.