
ನವದೆಹಲಿ: ನೂತನ ರಾಷ್ಟ್ರೀಯ ಕ್ರೀಡಾ ಆಡಳಿತ ಕಾಯ್ದೆಯ ಕರಡು ನಿಯಮಗಳ ಕುರಿತು ಸಾರ್ವಜನಿಕರು ಪ್ರತಿಕ್ರಿಯೆ ಸಲ್ಲಿಸಲು ನವೆಂಬರ್ 14ರವರೆಗೆ ಕ್ರೀಡಾ ಸಚಿವಾಲಯ ಅವಕಾಶ ಕಲ್ಪಿಸಿದೆ.
ರಾಷ್ಟ್ರೀಯ ಕ್ರೀಡಾ ಮಂಡಳಿ, ರಾಷ್ಟ್ರೀಯ ಕ್ರೀಡಾ ನ್ಯಾಯಮಂಡಳಿ ಮತ್ತು ರಾಷ್ಟ್ರೀಯ ಕ್ರೀಡಾ ಚುನಾವಣಾ ಸಮಿತಿ ಸ್ಥಾಪನೆ ಸಂಬಂಧ ಕರಡು ನಿಯಮಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಸಾರ್ವಜನಿಕರ ಪ್ರತಿಕ್ರಿಯೆಗೆ ಆಹ್ವಾನ ನೀಡಲಾಗಿದೆ.
ಪ್ರತಿಕ್ರಿಯೆಗಳನ್ನು ಸಚಿವಾಲಯಕ್ಕೆ ಅಂಚೆ ಮೂಲಕ ಅಥವಾ rules-nsga2025@sports.gov.in ಇಮೇಲ್ ಮೂಲಕ ಸಲ್ಲಿಸಬಹುದು.
ಕ್ರೀಡಾ ಸಚಿವ ಮನ್ಸುಖ್ ಮಾಂಡವೀಯ ಅವರು 2026ರ ಮೊದಲಾರ್ಧದಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲು ಉತ್ಸುಕರಾಗಿದ್ದಾರೆ. ಈ ವರ್ಷದ ಅಂತ್ಯದಲ್ಲಿ ರಾಷ್ಟ್ರೀಯ ಕ್ರೀಡಾ ಆಡಳಿತ ಕಾಯ್ದೆಯನ್ನು ಅಂತಿಮಗೊಳಿಸಲು ಸಿದ್ಧತೆ ನಡೆಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.