ನವದೆಹಲಿ: ಭಾರತ ತಂಡದ ಸ್ಪರ್ಧಿಗಳು, ಕ್ವಾಲಾಲಂಪುರದಲ್ಲಿ ಸೆ. 16 ರಿಂದ 20ರವರೆಗೆ ನಡೆದ ವಿಶೇಷ ಒಲಿಂಪಿಕ್ಸ್ ಏಷ್ಯಾ ಪೆಸಿಫಿಕ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಒಂದು ಚಿನ್ನ, ಮೂರು ಬೆಳ್ಳಿ ಪದಕಗಳನ್ನು ಗೆದ್ದುಕೊಂಡಿದ್ದಾರೆ.
ಚಾನ್ವಿ ಶರ್ಮಾ ಮಹಿಳೆಯರ ಸಿಂಗಲ್ಸ್‌ನಲ್ಲಿ ಚಿನ್ನ ಗೆದ್ದರು. ನಂತರ ಸುಜಿತಾ ಸುಕುಮಾರನ್ ಜೊತೆಗೂಡಿ ಡಬಲ್ಸ್‌ನಲ್ಲಿ ಬೆಳ್ಳಿ ಗೆದ್ದರು ಎಂದು ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಪ್ರಕಟಣೆ ತಿಳಿಸಿದೆ.
ಅಂಕಿತ್ ದಲಾಲ್ ಪುರುಷರ ಸಿಂಗಲ್ಸ್‌ನಲ್ಲಿ ಬೆಳ್ಳಿ ಗೆದ್ದರು. ಡಬಲ್ಸ್‌ನಲ್ಲಿ ಅಮಲ್ ಬಿಜು ಜೊತೆಗೂಡಿ ಇನ್ನೊಂದು ಬೆಳ್ಳಿ ಪದಕವನ್ನೂ ತಮ್ಮದಾಗಿಸಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.