ರಾಷ್ಟ್ರಪತಿ ದ್ರೌಪದಿ
ನವದೆಹಲಿ: ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ಅಂಕಿತ ಹಾಕಿದ್ದಾರೆ. ಹೀಗಾಗಿ ಈ ಕಾಯ್ದೆ ಕಾನೂನಿನ ಸ್ವರೂಪ ಪಡೆದುಕೊಂಡಿತು. ಈ ಸಂಬಂಧ ಮಂಗಳವಾರ ಗೆಜೆಟ್ ಅಧಿಸೂಚನೆ ಹೊರಡಿಸಲಾಗಿದೆ.
ಈ ಹಿಂದೆ 2011ರ ರಾಷ್ಟ್ರೀಯ ಕ್ರೀಡಾಸಂಹಿತೆ ಜಾರಿಯಲ್ಲಿತ್ತು. ಈಗ ಜಾರಿಯಾಗುವ ಹೊಸ ಕಾನೂನಿನಡಿ ರಾಷ್ಟ್ರೀಯ ಕ್ರೀಡಾ ಮಂಡಳಿ ಮತ್ತು ರಾಷ್ಟ್ರೀಯ ಕ್ರೀಡಾ ನ್ಯಾಯಮಂಡಳಿ ಅಸ್ತಿತ್ವಕ್ಕೆ ಬರಲಿದೆ. ರಾಷ್ಟ್ರೀಯ ಕ್ರೀಡಾ ಮಂಡಳಿಯು, ರಾಷ್ಟ್ರೀಯ ಕ್ರೀಡಾ ಫೆಡರೇಷನ್‌ಗಳಿಗೆ ಮಾನ್ಯತೆ ನೀಡುವ ಅಥವಾ ರದ್ದುಗೊಳಿಸುವ ಅಧಿಕಾರ ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.