ADVERTISEMENT

ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 19:08 IST
Last Updated 27 ಫೆಬ್ರುವರಿ 2020, 19:08 IST

ಧಾರವಾಡ: ಕರ್ನಾಟಕ ಕುಸ್ತಿ ಹಬ್ಬದ ಗುಂಗು ದೂರವಾಗುವ ಮೊದಲೇ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಪೇಢಾ ನಗರಿ ನವವಧುವಿನಂತೆ ಸಿಂಗಾರಗೊಂಡಿದೆ. ಶುಕ್ರವಾರದಿಂದ ಮೂರು ದಿನ ಕ್ರೀಡಾಕೂಟ ನಡೆಯಲಿದೆ.

ರಾಜ್ಯದ ಎಲ್ಲ ಜಿಲ್ಲೆಗಳಿಂದ ಸುಮಾರು 9 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು, ಅಧಿಕಾರಿ ವರ್ಗ ಹಾಗೂ ಸಿಬ್ಬಂದಿ ಸೇರಿದಂತೆ ಒಟ್ಟು11 ಸಾವಿರ ಜನ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

‘ಕ್ರೀಡಾಕೂಟಕ್ಕಾಗಿ ನಗರದ 10 ಹೊರಾಂಗಣ ಕ್ರೀಡಾಂಗಣ ಮತ್ತು 6 ಒಳಾಂಗಣ ಕ್ರೀಡಾಂಗಣಗಳು ಸಜ್ಜುಗೊಂಡಿವೆ. ಒಟ್ಟು 48 ಕ್ರೀಡೆ ಮತ್ತು 28 ಸಾಂಸ್ಕೃತಿಕ ಸ್ಪರ್ಧೆಗಳನ್ನು ವೈಯಕ್ತಿಕ ಹಾಗೂ ಗುಂಪು ವಿಭಾಗದಲ್ಲಿ ನಡೆಸಲಾಗುತ್ತದೆ.ಕ್ರೀಡಾಕೂಟಕ್ಕೆ ರಾಜ್ಯ ಸರ್ಕಾರ ₹2ಕೋಟಿ ಅನುದಾನ ಮೀಸಲಿಟ್ಟಿದ್ದು, ಈಗಾಗಲೇ ₹1ಕೋಟಿ ಮಂಜೂರು ಮಾಡಿದೆ. ಜತೆಗೆ ಕ್ರೀಡಾಪಟುಗಳಿಗೆ ಮೂರು ದಿನಗಳ ಒಒಡಿ ಸೌಲಭ್ಯ ಸಿಗಲಿದೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಫ್.ಸಿದ್ಧನಗೌಡರ ತಿಳಿಸಿದರು.

ADVERTISEMENT

ನಗರದ ಆರ್.ಎನ್.ಶೆಟ್ಟಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.