ADVERTISEMENT

30ನೇ ಸ್ಥಾನಕ್ಕೇರಿದ ಶರತ್‌

ಪಿಟಿಐ
Published 3 ಡಿಸೆಂಬರ್ 2018, 17:12 IST
Last Updated 3 ಡಿಸೆಂಬರ್ 2018, 17:12 IST

ನವದೆಹಲಿ: ಭಾರತದ ಅನುಭವಿ ಟೇಬಲ್‌ ಟೆನಿಸ್‌ ಆಟಗಾರ ಅಚಂತಾ ಶರತ್‌ ಕಮಲ್‌ ಅವರು ಸೋಮವಾರ ಐಟಿಟಿಎಫ್‌ ಬಿಡುಗಡೆ ಮಾಡಿರುವ ಸಿಂಗಲ್ಸ್‌ ವಿಭಾಗದ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ 30ನೇ ಸ್ಥಾನಕ್ಕೇರಿದೆ.

ಈ ಬಾರಿಯ ಏಷ್ಯನ್‌ ಕ್ರೀಡಾಕೂಟದಲ್ಲಿ ಎರಡು ಕಂಚಿನ ಪದಕಗಳನ್ನು ಜಯಿಸಿದ್ದ 36 ವರ್ಷ ವಯಸ್ಸಿನ ಶರತ್‌, ಒಂದು ಸ್ಥಾನ ಮೇಲೇರಿದ್ದಾರೆ.

ಜಿ.ಸತ್ಯನ್‌ 31ನೇ ಸ್ಥಾನಕ್ಕೆ ಪ್ರಗತಿ ಕಂಡಿದ್ದಾರೆ. ಇದು ಅವರ ವೃತ್ತಿಬದುಕಿನ ಶ್ರೇಷ್ಠ ಸಾಧನೆಯಾಗಿದೆ. ಅವರು ನಾಲ್ಕು ಸ್ಥಾನ ಬಡ್ತಿ ಹೊಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.