
ಪ್ರಜಾವಾಣಿ ವಾರ್ತೆ
ಬೆಂಗಳೂರು: ಮಲ್ಲೇಶ್ವರಂ ಅಸೋಸಿಯೇಷನ್ ಆಶ್ರಯದ 5ನೇ ರಾಜ್ಯ ರ‍್ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯ 13 ವರ್ಷದೊಳಗಿನವರ ವಿಭಾಗದಲ್ಲಿ ನಗರದ ಸಿದ್ಧಾಂತ್ ಎಂ. ಅವರು 13 ವರ್ಷದೊಳಗಿನವರ ವಿಭಾಗದ ಸಿಂಗಲ್ಸ್ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.
ಅಸೋಸಿಯೇಷನ್ ಸಭಾಂಗಣದಲ್ಲಿ ಗುರುವಾರ ನಡೆದ ಫೈನಲ್‌ನಲ್ಲಿ ಸಿದ್ಧಾಂತ್ 11–7, 11–8, 11–8 ರಿಂದ ಆರ್ನವ್ ಮಿಥುನ್ ವಿರುದ್ಧ ಜಯಗಳಿಸಿದರು.
ಸೆಮಿಫೈನಲ್ ಪಂದ್ಯಗಳಲ್ಲಿ ಸಿದ್ಧಾಂತ್ 9–11, 11–8, 11–7, 12–10 ರಿಂದ ರಿಯಾನ್ಶ್ ಗರ್ಗ್ ಅವರನ್ನು, ಆರ್ನವ್ 9–11, 11–5, 11–6, 11–5 ರಿಂದ ಸಿ.ಎಂ.ಹರ್ಷಿತ್ ಅವರನ್ನು ಪರಾಭವಗೊಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.