ADVERTISEMENT

Tokyo Olympics ಬಾಕ್ಸಿಂಗ್: ಎಂಟರ ಘಟ್ಟದಲ್ಲಿ ಎಡವಿದ ಸತೀಶ್‌, ಕೈತಪ್ಪಿದ ಪದಕ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಆಗಸ್ಟ್ 2021, 4:45 IST
Last Updated 1 ಆಗಸ್ಟ್ 2021, 4:45 IST
ಸತೀಶ್ ಕುಮಾರ್
ಸತೀಶ್ ಕುಮಾರ್   

ಟೋಕಿಯೊ: ಜಪಾನ್‌ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಭರವಸೆಯಾಗಿದ್ದ ಬಾಕ್ಸರ್ ಸತೀಶ್ ಕುಮಾರ್, ಕ್ವಾರ್ಟರ್‌ಫೈನಲ್‌ನಲ್ಲಿ ಸೋಲು ಅನುಭವಿಸಿದ್ದಾರೆ. ಇದರೊಂದಿಗೆ ಕಂಚಿನ ಪದಕ ಕೈತಪ್ಪಿದೆ.

ಭಾನುವಾರ ನಡೆದ ಪುರುಷರ ಸೂಪರ್ ಹೆವಿವೇಟ್ (91+ ಕೆ.ಜಿ.) ವಿಭಾಗದಲ್ಲಿ ಸತೀಶ್ ಕುಮಾರ್, ವಿಶ್ವ ನಂ.1 ರ‍್ಯಾಂಕ್‌ನ ಉಜ್ಬೇಕಿಸ್ತಾನದ ಬಖೋದಿರ್ ಜಲೋಲೋವ್ ವಿರುದ್ಧ 0-5ರಲ್ಲಿ ಸೋಲು ಅನುಭವಿಸಿದರು.

32 ವರ್ಷದ ಸತೀಶ್ ಕುಮಾರ್ ದಿಟ್ಟ ಹೋರಾಟವನ್ನು ಪ್ರದರ್ಶಿಸಿದರೂ ಅಗ್ರ ಶ್ರೇಯಾಂಕಿತ ಬಾಕ್ಸರ್ ವಿರುದ್ಧ ಮೇಲುಗೈ ಸಾಧಿಸಲು ಸಾಧ್ಯವಾಗಲಿಲ್ಲ.

ಹಾಗೊಂದು ವೇಳೆ ಕನಿಷ್ಠ ಸೆಮಿಫೈನಲ್‌ಗೆ ಪ್ರವೇಶಿಸಲು ಸಾಧ್ಯವಾಗಿದ್ದಲ್ಲಿ ಕಂಚಿನ ಪದಕ ಗೆಲ್ಲುವ ಅವಕಾಶವಿತ್ತು. ಕಳೆದ ದಿನ ಪೂಜಾ ರಾಣಿ ಸಹ ಅಂತಿಮ ಎಂಟರ ಘಟ್ಟದಲ್ಲಿ ಎಡವಿದ್ದರು.

ಶುಕ್ರವಾರ ಮಹಿಳೆಯರ 69 ಕೆ.ಜಿ. ವಿಭಾಗದಲ್ಲಿ ಲವ್ಲಿನಾ ಬೋರ್ಗೊಹೈನ್ ಸೆಮಿಫೈನಲ್ ಪ್ರವೇಶಿಸಿದ್ದರು. ಈ ಮೂಲಕ ಕನಿಷ್ಠ ಕಂಚಿನ ಪದಕ ಖಾತ್ರಿಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.