ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದ ಆರ್ಚರಿ ಮಿಶ್ರ ರಿಕರ್ವ್ ವಿಭಾಗದಲ್ಲಿ ಭಾರತದ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಜಾಧವ್ ತಂಡವು ಕ್ವಾರ್ಟರ್ ಫೈನಲ್ನಲ್ಲಿ ಮುಗ್ಗರಿಸಿದೆ.
ಶನಿವಾರ ನಡೆದ ಅಂತಿಮ ಎಂಟರ ಘಟ್ಟದ ಹೋರಾಟದಲ್ಲಿ ದೀಪಿಕಾ-ಪ್ರವೀಣ್ ತಂಡವು ದಕ್ಷಿಣ ಕೊರಿಯಾ ವಿರುದ್ಧ 2-6ರ ಅಂತರದಲ್ಲಿ ಸೋಲು ಅನುಭವಿಸಿದರು.
ಇದನ್ನೂ ಓದಿ:Tokyo Olympics | ಭಾರತಕ್ಕೆ ಮೊದಲ ಪದಕ; ಬೆಳ್ಳಿ ಗೆದ್ದ ಮೀರಾಬಾಯಿ ಚಾನು
ಇದಕ್ಕೂ ಮೊದಲು ಭಾರತದ ಆರ್ಚರಿಪಟುಗಳು ಚೈನೀಸ್ ತೈಪೆಯ ವಿರುದ್ಧ 5-3ರ ಅಂತರದಲ್ಲಿ ಗೆದ್ದು ಕ್ವಾರ್ಟರ್ಫೈನಲ್ಗೆ ಪ್ರವೇಶಿಸಿದರು. ಆದರೆ ಮತ್ತದೇ ಶ್ರೇಷ್ಠ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.