ADVERTISEMENT

Tokyo Olympics | ಮುಂದುವರಿದ ಭಾರತೀಯ ಶೂಟರ್‌ಗಳ ಕಳಪೆ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 4:04 IST
Last Updated 25 ಜುಲೈ 2021, 4:04 IST
ಮನು ಭಾಕರ್
ಮನು ಭಾಕರ್   

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶೂಟಿಂಗ್ ವಿಭಾಗದಲ್ಲಿ ಭಾರತೀಯ ಶೂಟರ್‌ಗಳ ಕಳಪೆ ಪ್ರದರ್ಶನ ಮುಂದುವರಿದಿದೆ. ಭಾನುವಾರ ನಡೆದ ಸ್ಪರ್ಧೆಯಲ್ಲಿ ಮನು ಭಾಕರ್ ಹಾಗೂ ಯಶಸ್ವಿನಿ ಸಿಂಗ್ ದೇಸ್ವಾಲ್ ನಿರಾಸೆ ಮೂಡಿಸಿದ್ದಾರೆ.

ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಪದಕ ಸುತ್ತಿಗೆ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ಮನು ಭಾಕರ್ ಹಾಗೂ ಯಶಸ್ವಿನಿ ಸಿಂಗ್ ದೇಸ್ವಾಲ್ ವಿಫಲದಾದರು.

ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಮನು ಹಾಗೂ ಯಶಸ್ವಿನಿ ಅತಿ ಒತ್ತಡದ ಪರಿಸ್ಥಿತಿಯನ್ನು ನಿಭಾಯಿಸಲು ವಿಫಲರಾದರು. ಇದರೊಂದಿಗೆ ಸತತ ಎರಡನೇ ದಿನವೂ ಶೂಟಿಂಗ್‌ನಲ್ಲಿ ಭಾರತೀಯ ಶೂಟರ್‌ಗಳು ಕಳಪೆ ಪ್ರದರ್ಶನ ನೀಡಿದ್ದಾರೆ.

19ರ ಹರೆಯದ ಮನು ಭಾಕರ್, ಒಟ್ಟು 575 ಸ್ಕೋರ್ ಸಂಪಾದಿಸಿ 12ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡರು. ಅತ್ತ ಯಶಸ್ವಿನಿ 13ನೇ ಸ್ಥಾನ ಪಡೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.