ADVERTISEMENT

Tokyo Olympics: ಭರವಸೆಯ ಪಥದಲ್ಲಿ ನೀರಜ್‌ ಚೋಪ್ರಾ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2021, 19:55 IST
Last Updated 3 ಆಗಸ್ಟ್ 2021, 19:55 IST
ನೀರಜ್ ಚೋಪ್ರಾ
ನೀರಜ್ ಚೋಪ್ರಾ    

ಒಲಿಂಪಿಕ್ಸ್‌ನ ಟ್ರ್ಯಾಕ್‌ ಮತ್ತು ಫೀಲ್ಡ್‌ನಲ್ಲಿ ಭಾರತದ ಅಥ್ಲೀಟ್‌ಗಳ ಮತ್ತೊಮ್ಮೆ ನಿರಾಶೆ ಅನುಭವಿಸಿದ್ದಾರೆ. ಈಗ ಪುರುಷರ ಜಾವೆಲಿನ್ ಎಸೆತದಲ್ಲಿ ಭಾರತ ನಿರೀಕ್ಷೆ ಇರಿಸಿಕೊಂಡಿದೆ. ಪದಕದ ಭರವಸೆಯೊಂದಿಗೆ ನೀರಜ್ ಚೋಪ್ರಾ ಬುಧವಾರ ಕಣಕ್ಕೆ ಇಳಿಯಲಿದ್ದಾರೆ. ಅರ್ಹತಾ ಸುತ್ತಿನ ‘ಎ’ ಗುಂಪಿನಲ್ಲಿ ಅವರು ಕಾಣಿಸಿಕೊಳ್ಳಲಿದ್ದಾರೆ.

ವಯಸ್ಸು: 23

ಪಾಲ್ಗೊಳ್ಳುವ ಸ್ಪರ್ಧೆ: ಜಾವೆಲಿನ್‌ ಎಸೆತ

ADVERTISEMENT

ವೈಯಕ್ತಿಕ ಶ್ರೇಷ್ಠ ಸಾಧನೆ: 88.07 ಮೀಟರ್ಸ್‌ (2021)

ಗೋಲ್ಡ್‌ಕೋಸ್ಟ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್‌ ಮತ್ತು ಜಕಾರ್ತದಲ್ಲಿ ಜರುಗಿದ್ದ ಏಷ್ಯನ್‌ ಕ್ರೀಡಾಕೂಟಗಳಲ್ಲಿ ಚಿನ್ನದ ಸಾಧನೆ

ಭುವನೇಶ್ವರದಲ್ಲಿ ಆಯೋಜನೆಯಾಗಿದ್ದ ಏಷ್ಯನ್‌ ಚಾಂಪಿಯನ್‌ಷಿಪ್‌ ನಲ್ಲಿ ಚಿನ್ನದ ಸಾಮರ್ಥ್ಯ

ಗುವಾಹಟಿಯಲ್ಲಿ ನಡೆದಿದ್ದ ದಕ್ಷಿಣ ಏಷ್ಯನ್‌ ಕ್ರೀಡಾಕೂಟ ಮತ್ತು ಪೋಲೆಂಡ್‌ನಲ್ಲಿ ನಡೆದಿದ್ದ ವಿಶ್ವ ಜೂನಿಯರ್‌ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಜಯಿಸಿದ ಹಿರಿಮೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.