ಟೋಕಿಯೊ: ಜಪಾನ್‌ನಲ್ಲಿ ಸಾಗುತ್ತಿರುವ ಟೋಕಿಯೊ ಒಲಿಂಪಿಕ್ಸ್ ರದ್ದುಗೊಳಿಸುವಂತೆ ಆಗ್ರಹಿಸಿ ಕೆಲವರು ಪ್ರತಿಭಟನೆ ನಡೆಸಿರುವ ಬಗ್ಗೆ ವರದಿಯಾಗಿದೆ.
ಭಾನುವಾರದಂದು ಟೆನಿಸ್ ಪುರುಷ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪಂದ್ಯ ನಡೆಯುತ್ತಿರುವಾಗ, ಟೆನಿಸ್ ಕೋರ್ಟ್ ಹೊರಗಡೆ ಜಮಾಯಿಸಿದ 10 ಮಂದಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾಕಾರರು 'ಒಲಿಂಪಿಕ್ಸ್ ರದ್ದುಗೊಳಿಸಿ', 'ಆಟವನ್ನು ನಿಲ್ಲಿಸಿ' ಎಂಬ ಘೋಷಣೆಗಳನ್ನು ಕೂಗಿದರು. ಅಲ್ಲದೆ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.
ಕೋವಿಡ್-19 ಸಾಂಕ್ರಾಮಿಕ ರೋಗದ ಅತ್ಯಂತ ಕಷ್ಟದ ಸಮಯದಲ್ಲಿ ಜನರು ಸಾಯುತ್ತಿದ್ದು, ನರಳುತ್ತಿದ್ದಾರೆ. ಈ ಸಂದರ್ಭದಲ್ಲಿ ಒಲಿಂಪಿಕ್ಸ್ ಆಯೋಜನೆ ಸೂಕ್ತವಲ್ಲ ಎಂದು ಪ್ರತಿಭಟನಾಕಾರರು ತಿಳಿಸಿದ್ದಾರೆ.
ಪ್ರತಿಭಟನೆಯ ಕೂಗು ಟೆನಿಸ್ ಕೋರ್ಟ್‌ನಲ್ಲಿ ಫೈನಲ್ ಆಡುತ್ತಿದ್ದ ಜ್ವೆರೆವ್ ಕಿವಿಗೂ ತಲುಪಿರಬಹುದು ಎಂದು ಅಂದಾಜಿಸಲಾಗಿದೆ. ಪುರುಷ ಸಿಂಗಲ್ಸ್ ಫೈನಲ್ ಹೋರಾಟದಲ್ಲಿ ನಾಲ್ಕನೇ ಶ್ರೇಯಾಂಕಿತರಾದ ಜ್ವೆರೆವ್, ಎದುರಾಳಿ ರಷ್ಯಾದ ಕೆರೆನ್ ಕ್ಯಾಚ್‌ನೋವ್ ವಿರುದ್ಧ 6-3, 6-1ರ ಅಂತರದ ಸುಲಭ ಗೆಲುವು ದಾಖಲಿಸಿ ಚಿನ್ನದ ಪದಕ ಗೆದ್ದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.