ADVERTISEMENT

ಟೋಕಿಯೊ ಪ್ಯಾರಾಲಿಂಪಿಕ್ಸ್‌: ಭಾರತೀಯ ಅಥ್ಲೀಟ್‌ಗಳಿಗೆ ಶುಭ ಕೋರಿದ ವಿರಾಟ್ ಕೊಹ್ಲಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಆಗಸ್ಟ್ 2021, 3:19 IST
Last Updated 24 ಆಗಸ್ಟ್ 2021, 3:19 IST
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ: ಎಎಫ್‌ಪಿ ಚಿತ್ರ
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ: ಎಎಫ್‌ಪಿ ಚಿತ್ರ   

ನವದೆಹಲಿ: ಇಂದಿನಿಂದ ಆರಂಭವಾಗಲಿರುವ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಭಾರತದ ಪ್ಯಾರಾ ಅಥ್ಲೀಟ್‌ಗಳಿಗೆ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಶುಭ ಕೋರಿದ್ದಾರೆ.

ಈ ಕ್ರೀಡಾಕೂಟದಲ್ಲಿ ಭಾರತದ ದೇವೇಂದ್ರ ಜಜಾರಿಯಾ ಮತ್ತು ಮರಿಯಪ್ಪನ್ ತಂಗವೇಲು ಸೇರಿದಂತೆ 54 ಪ್ಯಾರಾ ಅಥ್ಲೀಟ್‌ಗಳು ಭಾಗವಹಿಸುತ್ತಿದ್ದಾರೆ. ಭಾರತದ ಅಥ್ಲೀಟ್‌ಗಳಿಗೆ ಸಾಮಾಜಿಕ ಜಾಲತಾಣದಲ್ಲಿ ವಿರಾಟ್ ಕೊಹ್ಲಿ ಶುಭ ಕೋರಿದ್ದಾರೆ. ‘ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸುತ್ತಿರುವ ಅಥ್ಲೀಟ್‌ಗಳಿಗೆ ನನ್ನ ಶುಭ ಹಾರೈಕೆ ಮತ್ತು ಬೆಂಬಲವನ್ನು ಕಳುಹಿಸುತ್ತಿದ್ದೇನೆ. ಪ್ರತಿಯೊಬ್ಬರಿಗೂ ನಾನು ಚಿಯರ್ ಮಾಡುತ್ತೇನೆ. ನೀವು ನಮ್ಮನ್ನು ಹೆಮ್ಮೆಪಡುವಂತೆ ಮಾಡುತ್ತೀರಿ ಎಂದು ನನಗೆ ಖಾತ್ರಿಯಿದೆ. #TeamIndia #Praise4para #Tokyo2020' ಎಂದು ಅವರು ತಿಳಿಸಿದ್ದಾರೆ.

ಭಾರತದ ಕ್ರೀಡಾಪಟುಗಳು ಒಂಬತ್ತು ಕ್ರೀಡೆಗಳಲ್ಲಿ ಭಾಗವಹಿಸಲಿದ್ದು,ಭಾರತವು ಈವರೆಗೆ ಪ್ಯಾರಾಲಿಂಪಿಕ್ಸ್‌ನಲ್ಲಿ 12 ಪದಕಗಳನ್ನು ಗೆದ್ದಿದೆ.

ADVERTISEMENT

1972ರಲ್ಲಿ ಮೊದಲ ಬಾರಿಗೆ ಭಾರತ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾಗವಹಿಸಿತ್ತು.

2016ರಲ್ಲಿ ಭಾರತವು ಎರಡು ಚಿನ್ನದ ಪದಕ, ಒಂದು ಬೆಳ್ಳಿ ಮತ್ತು ಒಂದು ಕಂಚು ಗೆದ್ದಿತ್ತು.

ಟೋಕಿಯೊದ ಒಲಿಂಪಿಕ್ ಕ್ರೀಡಾಂಗಣದಲ್ಲಿ ಇಂದು ಉದ್ಘಾಟನಾ ಸಮಾರಂಭ ನಡೆಯಲಿದೆ. ಇರಾನ್ ನಂತರ ಭಾರತದ ಆರು ಅಧಿಕಾರಿಗಳು ಮತ್ತು ಐದು ಕ್ರೀಡಾಪಟುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಈ ವರ್ಷ, 163 ದೇಶಗಳ ಸುಮಾರು 4500 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. 20 ಕ್ರೀಡೆಗಳಲ್ಲಿ 540 ಸ್ಪರ್ಧೆಗಳು ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.