ADVERTISEMENT

ಗೋರಖಪುರದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ: ಯೋಗಿ ಆದಿತ್ಯನಾಥ

ಪಿಟಿಐ
Published 3 ಜನವರಿ 2025, 16:24 IST
Last Updated 3 ಜನವರಿ 2025, 16:24 IST
ಯೋಗಿ ಆದಿತ್ಯನಾಥ
ಯೋಗಿ ಆದಿತ್ಯನಾಥ   

ಗೋರಖಪುರ: ಉತ್ತರ ಪ್ರದೇಶ ಸರ್ಕಾರವು ಗೋರಖಪುರದಲ್ಲಿ ಅಂತರರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಶುಕ್ರವಾರ ಹೇಳಿದ್ದಾರೆ.

ಇಲ್ಲಿನ ಭಾತಿ ವಿಹಾರ್ ಕಾಲೊನಿಯಲ್ಲಿ ಗೋರಖ್‌ಪುರದ ಮೊದಲ ಮಿನಿ ಕ್ರೀಡಾ ಸಂಕೀರ್ಣದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಉತ್ತರ ಪ್ರದೇಶ ಸರ್ಕಾರವು ಕ್ರೀಡೆಯನ್ನು ಉತ್ತೇಜಿಸಲು ಮತ್ತು ರಾಜ್ಯದೊಳಗಿನ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಬದ್ಧವಾಗಿದೆ ಎಂದು ಹೇಳಿದರು.

ಪ್ರತಿ ಗ್ರಾಮಗಳಲ್ಲಿ ಕ್ರೀಡಾ ಮೈದಾನಗಳನ್ನು ನಿರ್ಮಿಸಲಾಗುತ್ತಿದ್ದು, ಬ್ಲಾಕ್ ಮಟ್ಟದಲ್ಲಿ ಮಿನಿ ಕ್ರೀಡಾಂಗಣ ಹಾಗೂ ಜಿಲ್ಲಾ ಮಟ್ಟದಲ್ಲಿ ಪೂರ್ಣ ಪ್ರಮಾಣದ ಕ್ರೀಡಾಂಗಣ ನಿರ್ಮಾಣಕ್ಕೆ ಅನುದಾನ ಹಾಗೂ ಭೂಮಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ADVERTISEMENT

ಕ್ರೀಡೆ ಹಾಗೂ ಆಟಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೂರಲ್ ಸ್ಪೋರ್ಟ್ಸ್ ಲೀಗ್ ಆರಂಭಿಸಿದ್ದು, ಯುವಕ ಮಂಗಳ ದಳ ಹಾಗೂ ಮಹಿಳಾ ಮಂಗಳ ದಳಗಳ ಮೂಲಕ ಗ್ರಾಮಗಳಲ್ಲಿ ಕ್ರೀಡಾ ವಾತಾವರಣ ನಿರ್ಮಿಸಲಾಗುತ್ತಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.