
ಪ್ರಜಾವಾಣಿ ವಾರ್ತೆಉಡುಪಿ: ತಮಿಳುನಾಡಿ ತಂಜಾವೂರಿನಲ್ಲಿ ಫೆಬ್ರುವರಿ 3ರಿಂದ 5ರವರೆಗೆ ನಡೆಯಲಿರುವ ರಾಷ್ಟ್ರೀಯ ಸಿಟ್ಟಿಂಗ್ ವಾಲಿಬಾಲ್ ಚಾಂಪಿಯನ್‌ಷಿಪ್‌ಗೆ ಆಟಗಾರರ ಆಯ್ಕೆ ಪ್ರಕ್ರಿಯೆ ಇದೇ 15ರಿಂದ ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ ಬಳಿಯ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆಯಲಿದೆ.
ಆಸಕ್ತ ಕ್ರೀಡಾಪಟುಗಳು ಆಯ್ಕೆ ಶಿಬಿರದಲ್ಲಿ ಭಾಗವಹಿಸಿ ನೋಂದಾಯಿಸಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ಅಂಗವಿಕಲರ ವಾಲಿಬಾಲ್ ಸಂಸ್ಥೆ ತಿಳಿಸಿದೆ.
ಶಿಬಿರದಲ್ಲಿ ಭಾಗವಹಿಸುವವರು ಅಂಗವೈಕಲ್ಯ ದೃಢೀಕರಿಸುವ ವೈದ್ಯಕೀಯ ಪ್ರಮಾಣಪತ್ರ ಹಾಗೂ ಮೊಬೈಲ್ ನಂಬರ್ ನೀಡಬೇಕು. ಮಾಹಿತಿಗೆ ಸಂಸ್ಥೆಯ ಅಧ್ಯಕ್ಷ ಎಂ.ಆರ್.ಮಹೇಶ್ (9535566606) ಅಥವಾ ಪ್ರಧಾನ ಕಾರ್ಯದರ್ಶಿ ಎಚ್.ಚಂದ್ರಶೇಖರ್ (9448706475) ಅವರನ್ನು ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.