ADVERTISEMENT

ವಾಲಿಬಾಲ್ ಪಟು ಜಾಫರ್ ನಿಧನ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 23:15 IST
Last Updated 13 ನವೆಂಬರ್ 2020, 23:15 IST
ಜಾಫರ್
ಜಾಫರ್   

ಶಿವಮೊಗ್ಗ: ರಾಷ್ಟ್ರೀಯ ವಾಲಿಬಾಲ್ ತಂಡದಲ್ಲಿ ಆಡಿದ್ದ ಇಲ್ಲಿಯ ಜಾಫರ್ ಅವರು ಬ್ರೇನ್‌ ಟ್ಯೂಮರ್‌ನಿಂದಾಗಿ ಶುಕ್ರವಾರ ನಿಧನರಾದರು. ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳು ಇದ್ದಾರೆ.

ಜಾಫರ್ ಸೈಕ್ಲಿಂಗ್‌ ಕ್ರೀಡೆಯಲ್ಲಿಯೂ ಛಾಪು ಮೂಡಿಸಿದ್ದರು. ರಾಷ್ಟ್ರೀಯ ವಾಲಿಬಾಲ್ ತಂಡದಲ್ಲೂ ಪ್ರಮುಖ ಆಟಗಾರನಾಗಿ ಗುರುತಿಸಿಕೊಂಡಿದ್ದರು ಎಂದು ಶಿವಮೊಗ್ಗದ ವಾಲಿಬಾಲ್ ಅಸೋಸಿಯೇಷನ್ ಅಧ್ಯಕ್ಷ ಭಾಸ್ಕರ್ ಜಿ. ಕಾಮತ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT