ADVERTISEMENT

ಉದ್ದೀಪನಾ ಮದ್ದು ಸೇವನೆ: ವೇಟ್‌ಲಿಫ್ಟರ್‌ ಸೀಮಾ ಮೇಲೆ ನಿಷೇಧ

ಪಿಟಿಐ
Published 28 ಡಿಸೆಂಬರ್ 2019, 11:46 IST
Last Updated 28 ಡಿಸೆಂಬರ್ 2019, 11:46 IST
ಸೀಮಾ
ಸೀಮಾ   

ನವದೆಹಲಿ:ಕಾಮನ್‌ವೆಲ್ತ್‌ ಚಾಂಪಿಯನ್‌ಷಿಪ್‌ನ ಬೆಳ್ಳಿ ಪದಕ ವಿಜೇತೆ ವೇಟ್‌ಲಿಫ್ಟರ್‌ ಸೀಮಾ ಅವರು ಉದ್ದೀಪನಾ ಮದ್ದು ಸೇವಿಸಿ ಸಿಕ್ಕಿಬಿದ್ದಿದ್ದಾರೆ. ಅವರ ಮೇಲೆ ನಾಲ್ಕು ವರ್ಷಗಳ ನಿಷೇಧ ಹೇರಲಾಗಿದೆ.

ಈ ಕುರಿತು ರಾಷ್ಟ್ರೀಯ ಉದ್ದೀಪನಾ ಮದ್ದು ಸೇವನೆ ತಡೆ ಘಟಕ (ನಾಡಾ) ಹೇಳಿಕೆ ನೀಡಿದೆ. ‘ವಿಶಾಖಪಟ್ಟಣದಲ್ಲಿ ನಡೆದಿದ್ದ ರಾಷ್ಟ್ರೀಯ ಮಹಿಳಾ ವೇಟ್‌ಲಿಫ್ಟಿಂಗ್‌ ಚಾಂಪಿಯನ್‌ಷಿಪ್‌ ವೇಳೆ ಸೀಮಾ ಅವರಿಂದ ಪರೀಕ್ಷೆಗಾಗಿ ಮಾದರಿ ಸಂಗ್ರಹಿಸಲಾಗಿತ್ತು. ಇದರಲ್ಲಿ ನಿಷೇಧಿತ ದ್ರವ್ಯ ಕಂಡುಬಂದಿದ್ದು, ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ’ ಎಂದು ನಾಡಾ ಹೇಳಿದೆ.

ಈ ಕುರಿತು ವಿಚಾರಣೆ ನಡೆಸಿದ ನಾಡಾದ ಉದ್ದೀಪನ ಮದ್ದು ತಡೆ ಶಿಸ್ತು ಸಮಿತಿಯು (ಎಡಿಡಿಪಿ), ಸಾಮರ್ಥ್ಯ ವೃದ್ಧಿಗಾಗಿ ನಿಷೇಧಿತ ಮದ್ದು ಸೇವಿಸಿದ ಸೀಮಾ ಅವರಿಗೆ ನಾಲ್ಕು ವರ್ಷ ಅಮಾನತು ಶಿಕ್ಷೆ ವಿಧಿಸಿತ್ತು.

ADVERTISEMENT

2017ರಲ್ಲಿ ಗೋಲ್ಡ್‌ಕೋಸ್ಟ್‌ನಲ್ಲಿ ನಡೆದಿದ್ದ ಕಾಮನ್‌ವೆಲ್ತ್‌ ಚಾಂಪಿಯನ್‌ಷಿಪ್‌ನಲ್ಲಿ ಸೀಮಾ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. 2018ರ ಕಾಮನ್‌ವೆಲ್ತ್‌ ಗೇಮ್ಸ್‌ನ 75 ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಆರನೇ ಸ್ಥಾನ ಗಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.