ADVERTISEMENT

ಲೈಂಗಿಕ ಕಿರುಕುಳ ಪ್ರಕರಣ: ಬ್ರಿಜ್‌ಭೂಷಣ್ ನಿವಾಸದಲೇ WFI ಕಾರ್ಯನಿರ್ವಹಣೆ

ಪಿಟಿಐ
Published 25 ಜನವರಿ 2025, 10:42 IST
Last Updated 25 ಜನವರಿ 2025, 10:42 IST
ಬ್ರಿಜ್‌ಭೂಷಣ್ ಶರಣ್‌ ಸಿಂಗ್‌ 
ಬ್ರಿಜ್‌ಭೂಷಣ್ ಶರಣ್‌ ಸಿಂಗ್‌    

ನವದೆಹಲಿ: ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪ ಎದುರಿಸುತ್ತಿರುವ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ಅವರ ನಿವಾಸದಲ್ಲೇ ಕಾರ್ಯನಿರ್ವಹಿಸುತ್ತಿರುವುದಾಗಿ ಭಾರತ ಕುಸ್ತಿ ಫೆಡರೇಷನ್‌ನ (ಡಬ್ಲೂಎಫ್‌ಐ) ತಿಳಿಸಿದೆ.

ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ಬಳಸುತ್ತಿದ್ದ ನಿವಾಸದಲ್ಲಿ ತಾತ್ಕಾಲಿಕ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದ್ದು, ಮುಂದಿನ ತಿಂಗಳು ಹೊಸ ಕಚೇರಿಗೆ ಸ್ಥಳಾಂತರಗೊಂಡು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಡಬ್ಲ್ಯುಎಫ್‌ಐ ಅಧಿಕಾರಿಗಳು ತಿಳಿಸಿದ್ದಾರೆ.

‘ನಾವು ಸಣ್ಣ ಕಚೇರಿಯಿಂದ ಕಾರ್ಯನಿರ್ವಹಿಸುತ್ತಿದ್ದು, ಉತ್ತಮ ಸ್ಥಳವನ್ನು ಹುಡುಕುತ್ತಿದ್ದೆವು. ಆದರೆ, ಭಾರತ ಕುಸ್ತಿ ಫೆಡರೇಷನ್‌ನ ಅಧ್ಯಕ್ಷ ಸ್ಥಾನದಿಂದ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ಅವರನ್ನು ಸರ್ಕಾರ ಅಮಾನತುಗೊಳಿಸಿದ್ದರಿಂದ ಕಚೇರಿ ಸ್ಥಳಾಂತರ ಪ್ರಕ್ರಿಯೆ ವಿಳಂಬವಾಯಿತು’ ಎಂದು ಡಬ್ಲ್ಯುಎಫ್‌ಐ ಮೂಲಗಳು ತಿಳಿಸಿದ್ದಾರೆ.

ADVERTISEMENT

‘ಬಸಂತ್ ಪಂಚಮಿಯಂದು ನಾವು ಹೊಸ ಕಚೇರಿಗೆ ಹೋಗುತ್ತೇವೆ. ಬ್ರಿಜ್‌ಭೂಷಣ್‌ ಅವರನ್ನು ಅಮಾನತುಗೊಳಿಸಿರುವುದರಿಂದ ಉಂಟಾಗಿದ್ದ ಗೊಂದಲಗಳು ನಿವಾರಣೆಯಾಗಿವೆ. ಇನ್ನು ಮುಂದೆ ನಾವು ಮುಕ್ತವಾಗಿ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ಭಾವಿಸುತ್ತೇವೆ’ ಎಂದೂ ಡಬ್ಲ್ಯುಎಫ್‌ಐ ಮೂಲಗಳು ಹೇಳಿರುವುದಾಗಿ ವರದಿಯಾಗಿದೆ.

ಮಹಿಳಾ ಕುಸ್ತಿಪಟುಗಳ ಮೇಲೆ ಬ್ರಿಜ್‌ಭೂಷಣ್‌ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ದೇಶದ ಪ್ರಮುಖ ಕುಸ್ತಿಪಟುಗಳಾದ ವಿನೇಶ್‌ ಫೋಗಟ್‌, ಬಜರಂಗ್‌ ಪೂನಿಯಾ ಸೇರಿದಂತೆ ಅನೇಕರು ಪ್ರತಿಭಟನೆ ನಡೆಸಿದ್ದರು. ಪ್ರಕರಣದ ತನಿಖೆಗಾಗಿ ಬಾಕ್ಸರ್ ಮೇರಿ ಕೋಮ್ ನೇತೃತ್ವದಲ್ಲಿ 2023ರ ಜನವರಿ 23ರಂದು ಸಮಿತಿ ರಚಿಸಲಾಗಿತ್ತು. ಸದ್ಯ ಇದೇ ಸಮಿತಿಯು ಡಬ್ಲ್ಯುಎಫ್‌ಐನ ದೈನಂದಿನ ವ್ಯವಹಾರ ನೋಡಿಕೊಳ್ಳುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.