ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ)
ನವದೆಹಲಿ: ದೆಹಲಿ ಮಹಾನಗರ ಪಾಲಿಕೆಗೆ (ಎಂಸಿಡಿ) ನಕಲಿ ಜನನ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದಕ್ಕಾಗಿ 11 ಕುಸ್ತಿಪಟುಗಳನ್ನು ಅಮಾನತುಗೊಳಿಸಲಾಗಿದೆ ಎಂದು ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ತಿಳಿಸಿದೆ.
ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆದೇಶದ ಮೇರೆಗೆ ದೆಹಲಿ ಮಹಾನಗರ ಪಾಲಿಕೆಯು ದಾಖಲೆಗಳನ್ನು ಪರಿಶೀಲನೆ ನಡೆಸಿದೆ ಎಂದು ಡಬ್ಲ್ಯುಎಫ್‌ಐ ಮಾಹಿತಿ ನೀಡಿದೆ
ಕಡಿಮೆ ವಯಸ್ಸಿನ ಸ್ಪರ್ಧೆಗಳಲ್ಲಿ ಸ್ಪರ್ಧಿಸುವ ಹೆಚ್ಚಿನ ವಯಸ್ಸಿನ ಕುಸ್ತಿಪಟುಗಳು ನಕಲಿ ಜನನ ಪ್ರಮಾಣಪತ್ರಗಳನ್ನು ಪಡೆದ ನಂತರ ತಮ್ಮ ವಾಸಸ್ಥಳದಿಂದ ಬೇರೆ ರಾಜ್ಯವನ್ನು ಪ್ರತಿನಿಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಡಬ್ಲ್ಯುಎಫ್‌ಐ ಮೂಲಗಳು ತಿಳಿಸಿವೆ.
ಹರಿಯಾಣ ಕುಸ್ತಿಯ ತಾಣವಾಗಿರುವುದರಿಂದ ಅಭ್ಯರ್ಥಿಗಳ ನಡುವಿನ ಸ್ಪರ್ಧೆಯು ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕುಸ್ತಿಯಲ್ಲಿ ವೃತ್ತಿಜೀವನ ರೂಪಿಸಿಕೊಳ್ಳುವ ಉದ್ದೇಶದಿಂದ ಅನೇಕ ಕ್ರೀಡಾಪಟುಗಳು ನಕಲಿ ಪ್ರಮಾಣಪತ್ರಗಳನ್ನು ಪಡೆದು ನೆರೆಯ ರಾಜ್ಯವಾದ ದೆಹಲಿಯನ್ನು ಪ್ರತಿನಿಧಿಸಲು ಪ್ರಯತ್ನಿಸುತ್ತಿದ್ದಾರೆ ಎಂದೂ ಮೂಲಗಳು ಮಾಹಿತಿ ನೀಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.