
ಪ್ರಜಾವಾಣಿ ವಾರ್ತೆ
ಬ್ಯಾಸ್ಕೆಟ್‌ಬಾಲ್
ಬೆಂಗಳೂರು: ಆತಿಥೇಯ ಜೈನ್ ವಿಶ್ವವಿದ್ಯಾಲಯ ತಂಡವು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳಾ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಫೈನಲ್ ಪ್ರವೇಶಿಸಿತು.
ಕನಕಪುರ ರಸ್ತೆಯಲ್ಲಿರುವ ಜೈನ್ ವಿ.ವಿಯ ಗ್ಲೋಬಲ್ ಕ್ಯಾಂಪಸ್‌ನಲ್ಲಿ ಶುಕ್ರವಾರ ನಡೆದ ಸೆಮಿಫೈನಲ್‌ನಲ್ಲಿ ಜೈನ್ ತಂಡವು 51–42ರಿಂದ ಎಲ್‌ಎನ್‌ಐಪಿ ವಿ.ವಿ ತಂಡವನ್ನು ಮಣಿಸಿತು. ಮತ್ತೊಂದು ಸೆಮಿಫೈನಲ್‌ನಲ್ಲಿ ಪಂಜಾಬ್ ವಿ.ವಿ ತಂಡವು 76–63ರಿಂದ ಎಸ್‌ಆರ್‌ಎಂ ವಿ.ವಿ ತಂಡವನ್ನು ಮಣಿಸಿತು.
ಶನಿವಾರ ಫೈನಲ್‌ನಲ್ಲಿ ಪಂಜಾಬ್ ತಂಡವು ಜೈನ್ ತಂಡವನ್ನು ಎದುರಿ ಸಲಿದೆ. ಮೂರನೇ ಸ್ಥಾನಕ್ಕೆ ನಡೆಯುವ ಪಂದ್ಯದಲ್ಲಿ ಎಲ್‌ಎನ್‌ಐಪಿ ಮತ್ತು ಎಸ್‌ಆರ್‌ಎಂ ತಂಡಗಳು ಸೆಣಸಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.