ADVERTISEMENT

ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌: ಆರನೇ ಚಿನ್ನಕ್ಕೆ ಮುತ್ತಿಕ್ಕಿದ ಮೇರಿಕೋಮ್‌

ಮಹಿಳೆಯರ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌: ದಾಖಲೆ ಬರೆದ ಭಾರತದ ಬಾಕ್ಸರ್‌

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2018, 14:21 IST
Last Updated 24 ನವೆಂಬರ್ 2018, 14:21 IST
ಮೇರಿ ಕೋಮ್‌
ಮೇರಿ ಕೋಮ್‌    

ನವದೆಹಲಿ: ಭಾರತದ ಎಂ.ಸಿ.ಮೇರಿ ಕೋಮ್‌, ಶನಿವಾರ ಮಹಿಳೆಯರ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಜಯಿಸಿ ಚಾರಿತ್ರಿಕ ಸಾಧನೆ ಮಾಡಿದ್ದಾರೆ.

ಶನಿವಾರ ನಡೆದ 48 ಕೆ.ಜಿ.ವಿಭಾಗದ ಫೈನಲ್‌ನಲ್ಲಿ ಮಣಿಪುರದ ಮೇರಿ 5–0 ಪಾಯಿಂಟ್ಸ್‌ನಿಂದ ಉಕ್ರೇನ್‌ನ ಹನಾ ಒಖೋಟಾ ಅವರನ್ನು ಸೋಲಿಸಿದ್ದಾರೆ. ಈ ಮೂಲಕ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಆರನೇ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡು ದಾಖಲೆ ನಿರ್ಮಿಸಿದ್ದಾರೆ.

ಚಾಂಪಿಯನ್‌ಷಿಪ್‌ನಲ್ಲಿ ಆರು ಚಿನ್ನ ಮತ್ತು ಒಂದು ಬೆಳ್ಳಿ ಪದಕ ಗೆದ್ದ ಏಕೈಕ ಮಹಿಳಾ ಬಾಕ್ಸರ್‌ ಎಂಬ ಹಿರಿಮೆಗೆ ಮೇರಿ ಭಾಜನರಾಗಿದ್ದಾರೆ. ಜೊತೆಗೆ ವಿಶ್ವ ಚಾಂಪಿಯನ್‌ಷಿ‍ಪ್‌ನಲ್ಲಿ ಅತಿ ಹೆಚ್ಚು ಪದಕಗಳನ್ನು ಗೆದ್ದ ಕ್ಯೂಬಾದ ಫೆಲಿಕ್ಸ್‌ ಸೇವನ್‌ ಅವರ ದಾಖಲೆಯನ್ನೂ ಸರಿಗಟ್ಟಿದ್ದಾರೆ.

ADVERTISEMENT

ತಾವು ಗೆದ್ದ ಪ್ರಶಸ್ತಿಯನ್ನು ದೇಶಕ್ಕೆ ಅರ್ಪಿಸುವುದಾಗಿ ಅವರು ತಿಳಿಸಿದರು.

ಫೆಲಿಕ್ಸ್‌ ಅವರು 1986 ರಿಂದ 1989ರ ಅವಧಿಯಲ್ಲಿ ಪುರುಷರ ಹೆವಿವೇಟ್‌ ವಿಭಾಗದಲ್ಲಿ ಒಟ್ಟು ಆರು ಚಿನ್ನ ಮತ್ತು ಒಂದು ಬೆಳ್ಳಿಯ ಪದಕ ಜಯಿಸಿದ್ದರು.

2002ರಲ್ಲಿ ಮೊದಲ ಬಾರಿ ಮೇರಿ, ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನ ಗೆದ್ದಿದ್ದರು. ಆಗ ಅವರು 45 ಕೆ.ಜಿ ವಿಭಾಗದಲ್ಲಿ ಸ್ಪರ್ಧಿಸಿದ್ದರು. 2005, 2006 ಮತ್ತು 2008ರಲ್ಲಿ 46 ಕೆ.ಜಿ ವಿಭಾಗದಲ್ಲಿ ಚಿನ್ನ ಗಳಿಸಿದ್ದರು. 2010ರಲ್ಲಿ 48 ಕೆ.ಜಿ ವಿಭಾಗದಲ್ಲಿ ಕಣಕ್ಕೆ ಇಳಿದು ಮೊದಲಿಗರಾಗಿದ್ದರು.


The moment. Mary, World Champion for the sixth time. #boxing pic.twitter.com/HwLKuCFH7W

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.