ADVERTISEMENT

ತಮಿಳು ಸೂಪರ್ ಸ್ಟಾರ್‌ ರಜನಿಕಾಂತ್ ಭೇಟಿಯಾದ ವಿಶ್ವ ಚೆಸ್ ಚಾಂಪಿಯನ್ ಗುಕೇಶ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಡಿಸೆಂಬರ್ 2024, 9:05 IST
Last Updated 26 ಡಿಸೆಂಬರ್ 2024, 9:05 IST
<div class="paragraphs"><p> ರಜನಿಕಾಂತ್ ಮತ್ತು&nbsp;ಡಿ.ಗುಕೇಶ್</p></div>

ರಜನಿಕಾಂತ್ ಮತ್ತು ಡಿ.ಗುಕೇಶ್

   

Credit: X/@DGukesh

ಚೆನ್ನೈ: ಭಾರತೀಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಮತ್ತು ಹಾಲಿ ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್ ಅವರು ಇಂದು (ಗುರುವಾರ) ತಮ್ಮ ಕುಟುಂಬದೊಂದಿಗೆ ತಮಿಳು ಸೂಪರ್‌ ಸ್ಟಾರ್ ರಜನಿಕಾಂತ್ ಅವರನ್ನು ಭೇಟಿಯಾಗಿದ್ದಾರೆ.

ADVERTISEMENT

ರಜನಿಕಾಂತ್ ಅವರನ್ನು ಭೇಟಿಯಾದ ಫೋಟೊಗಳನ್ನು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಸೂಪರ್‌ ಸ್ಟಾರ್ ರಜನಿಕಾಂತ್ ಸರ್, ನಿಮ್ಮ ಆತ್ಮೀಯ ಹಾರೈಕೆಗಳು ಮತ್ತು ನಿಮ್ಮ ಜ್ಞಾನವನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.

18 ವರ್ಷದ ಗುಕೇಶ್ ಅವರು ಈಚೆಗೆ ಸಿಂಗಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಷಿಪ್‌ ಫೈನಲ್‌ನಲ್ಲಿ ಚೀನಾದ ಡಿಂಗ್ ಲಿರೇನ್ ವಿರುದ್ಧ ಗೆದ್ದು ದಾಖಲೆ ಬರೆದಿದ್ದರು.

ವಿಶ್ವ ಚೆಸ್ ಚಾಂಪಿಯನ್‌ಷಿಪ್ ಗೆದ್ದ ಅತಿ ಕಿರಿಯ ಆಟಗಾರ ಎನಿಸಿದ್ದಾರೆ. ಹಾಗೆಯೇ ಐದು ಬಾರಿಯ ವಿಶ್ವ ಚಾಂಪಿಯನ್ ಆನಂದ್ ಬಳಿಕ ಚೆಸ್ ಚಾಂಪಿಯನ್‌ಷಿಪ್ ಗೆದ್ದ ಎರಡನೇ ಭಾರತೀಯ ಎನಿಸಿದ್ದಾರೆ.

ಹೆಸರಾಂತ ಕೋಚ್ ಆಗಿರುವ ಪ್ಯಾಡಿ ಆಪ್ಟನ್ ಅವರು ಫೈನಲ್‌ಗೂ ಮುನ್ನ ಮತ್ತು ಅಂತಿಮ 14 ಸುತ್ತುಗಳ ಸಂದರ್ಭದಲ್ಲಿ ಅವರು ಗುಕೇಶ್ ಅವರಿಗೆ ಮಾರ್ಗದರ್ಶನ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.