ದಿವ್ಯಾ ದೇಶಮುಖ್
(ಚಿತ್ರ ಕೃಪೆ: X/@narendramodi)
ನವದೆಹಲಿ: ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್‌ಷಿಪ್‌ನಲ್ಲಿ ವಿಶ್ವದ ನಂ.1 ಆಟಗಾರ್ತಿಯನ್ನು ಮಣಿಸಿದ ಭಾರತದ ದಿವ್ಯಾ ದೇಶಮುಖ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಲಂಡನ್‌ನಲ್ಲಿ ನಡೆಯುತ್ತಿರುವ ವಿಶ್ವ ತಂಡ ಬ್ಲಿಟ್ಜ್ ಚಾಂಪಿಯನ್‌ಷಿಪ್ ಸೆಮಿಫೈನಲ್‌ನ ಎರಡನೇ ಲೆಗ್‌ನಲ್ಲಿ ವಿಶ್ವ ನಂ.1 ಆಟಗಾರ್ತಿ ಹೌ ಯಿಫಾನ್ ಅವರನ್ನು ದಿವ್ಯಾ ಮಣಿಸಿದ್ದಾರೆ.
ದಿವ್ಯಾ ಅವರನ್ನು ಅಭಿನಂದಿಸಿರುವ ಪ್ರಧಾನಿ, 'ಈ ಯಶಸ್ಸು ಆಕೆಯ ಮನೋಸ್ಥೈರ್ಯ ಮತ್ತು ದೃಢಸಂಕಲ್ಪವನ್ನು ತೋರಿಸುತ್ತದೆ. ಇದು ಮುಂಬರುವ ದಿನಗಳಲ್ಲಿ ಅನೇಕ ಚೆಸ್ ಆಟಗಾರರಿಗೆ ಸ್ಪೂರ್ತಿ ತುಂಬಲಿದೆ. ದಿವ್ಯಾ ಅವರ ಉತ್ತಮ ಭವಿಷ್ಯಕ್ಕಾಗಿ ಶುಭ ಹಾರೈಕೆಗಳು' ಎಂದು ಹೇಳಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿರುವ ದಿವ್ಯಾ, ಪ್ರಧಾನಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. 'ಪ್ರಧಾನಿ ಅವರಿಂದ ಗುರುತಿಸ್ಪಟ್ಟಿರುವುದು ನನಗೆ ಸಂದ ದೊಡ್ಡ ಗೌರವ ಹಾಗೂ ಪ್ರೋತ್ಸಾಹವಾಗಿದೆ' ಎಂದು ಹೇಳಿದ್ದಾರೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಸಹ ದಿವ್ಯಾ ಅವರನ್ನು ಅಭಿನಂದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.