
ಪ್ರಜಾವಾಣಿ ವಾರ್ತೆ
ನೋವಿಸಾದ್ (ಸರ್ಬಿಯಾ): ಭಾರತದ ಉದಯೋನ್ಮುಖ ಕುಸ್ತಿಪಟು ಸುಜೀತ್ ಕಲ್ಕಲ್ ಅವರು 23 ವರ್ಷದೊಳಗಿನವರ ವಿಶ್ವ ಕುಸ್ತಿ ಚಾಂಪಿಯನ್‌ಷಿಪ್‌ನಲ್ಲಿ ಚಿನ್ನದ ಪದಕ ಜಯಿಸಿದರು.
ಪುರುಷರ 65 ಕೆ.ಜಿ. ಫ್ರೀಸ್ಟೈಲ್ ವಿಭಾಗದಲ್ಲಿ ಕಣಕ್ಕಿಳಿದಿರುವ ಸುಜೀತ್ ಅವರು ಸೋಮವಾರ ನಡೆದ ಫೈನಲ್ ಹಣಾಹಣಿಯಲ್ಲಿ 10–0ಯಿಂದ ಉಜ್ಬೇಕಿಸ್ತಾನದ ಉಮಿಜೊನ್ ಜಲಲೊವ್ ಅವರನ್ನು ಅಧಿಕಾರಯುತವಾಗಿ ಮಣಿಸಿದರು.
22 ವರ್ಷ ವಯಸ್ಸಿನ ಸುಜೀತ್ ಅವರು ಕಳೆದ ಬಾರಿ ಈ ಟೂರ್ನಿಯಲ್ಲಿ ಕಂಚಿನ ಪದಕ ಜಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.