ADVERTISEMENT

ಕುಸ್ತಿ: ಮೇಲುಸ್ತುವಾರಿ ಸಮಿತಿಗೆ ಬಬಿತಾ ಪೋಗಟ್

ಪಿಟಿಐ
Published 31 ಜನವರಿ 2023, 15:38 IST
Last Updated 31 ಜನವರಿ 2023, 15:38 IST
ಬಬಿತಾ ಪೋಗಟ್
ಬಬಿತಾ ಪೋಗಟ್   

ನವದೆಹಲಿ: ಭಾರತ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್‌ ಮೇಲಿನ ಆರೋಪಗಳ ತನಿಖೆಗೆ ಕ್ರೀಡಾ ಸಚಿವಾಲಯ ನೇಮಿಸಿರುವ ಮೇಲುಸ್ತುವಾರಿ ಸಮಿತಿಯಲ್ಲಿ ಕಾಮನ್‌ವೆಲ್ತ್‌ ಕೂಟದ ಚಿನ್ನದ ಪದಕ ವಿಜೇತ ಕುಸ್ತಿಪಟು ಬಬಿತಾ ಪೋಗಟ್‌ ಅವರಿಗೆ ಸ್ಥಾನ ನೀಡಲಾಗಿದೆ.

‘ಡಬ್ಲ್ಯುಎಫ್‌ಐ ಆಡಳಿತ ನೋಡಿಕೊಳ್ಳಲು ನೇಮಿಸಿರುವ ಸಮಿತಿಗೆ ಕುಸ್ತಿಪಟು ಬಬಿತಾ ಪೋಗಟ್‌ ಅವರನ್ನೂ ಸೇರಿಸಿಕೊಳ್ಳಲಾಗಿದೆ’ ಎಂದು ಕ್ರೀಡಾ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಇದರಿಂದ ಬಾಕ್ಸರ್‌ ಎಂ.ಸಿ.ಮೇರಿಕೋಮ್‌ ನೇತೃತ್ವದ ಸಮಿತಿಯಲ್ಲಿರುವ ಸದಸ್ಯರ ಸಂಖ್ಯೆ ಆರಕ್ಕೇರಿದೆ.

ವಿನೇಶಾ ಪೋಗಟ್‌, ಬಜರಂಗ್‌ ಪೂನಿಯಾ, ಸಾಕ್ಷಿ ಮಲಿಕ್‌ ಮತ್ತು ರವಿ ದಹಿಯಾ ಒಳಗೊಂಡಂತೆ ಕುಸ್ತಿಪಟುಗಳು ಬ್ರಿಜ್‌ಭೂಷಣ್‌ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.