ಯಶ್ವೀರ್
ಬೆಂಗಳೂರು: ಪಾದದ ಗಾಯದಿಂದ ಬಳಲುತ್ತಿರುವ ಕಿಶೋರ್ ಜೇನಾ ಅವರು ಶನಿವಾರ ಇಲ್ಲಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಅಂತರರಾಷ್ಟ್ರೀಯ ಜಾವೆಲಿನ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಅವರ ಬದಲು ಯಶ್ವೀರ್ ಸಿಂಗ್ ಅವಕಾಶ ಪಡೆದಿದ್ದಾರೆ ಎಂದು ಸಂಘಟಕರು ಸೋಮವಾರ ತಿಳಿಸಿದ್ದಾರೆ.
23 ವರ್ಷ ವಯಸ್ಸಿನ ಯಶ್ವೀರ್, ಏಪ್ರಿಲ್‌ನಲ್ಲಿ ನಡೆದ ಫೆಡರೇಷನ್ ಕಪ್‌ನಲ್ಲಿ ಎರಡನೇ ಸ್ಥಾನ ಮತ್ತು ಮೇ ತಿಂಗಳಲ್ಲಿ ದಕ್ಷಿಣ ಕೊರಿಯಾದಲ್ಲಿ ನಡೆದ ಏಷ್ಯನ್ ಅಥ್ಲೆಟಿಕ್ಸ್ ಚಾಂಪಿಯನ್
ಷಿಪ್‌ನಲ್ಲಿ 82.57 ಮೀಟರ್ ವೈಯಕ್ತಿಕ ಅತ್ಯುತ್ತಮ ಸಾಧನೆಯೊಂದಿಗೆ ಐದನೇ ಸ್ಥಾನ ಪಡೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.