
ಪ್ರಜಾವಾಣಿ ವಾರ್ತೆಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಬಿ.ಎನ್.ವೈ.ಎಸ್. (ಬ್ಯಾಚುಲರ್ ಆಫ್ ನ್ಯಾಚುರೋಪಥಿ ಅಂಡ್ ಯೋಗಿಕ್ ಸೈನ್ಸ್) ಪದವಿ ಪ್ರವೇಶಕ್ಕೆ ಅರ್ಜಿ ಕರೆಯಲಾಗಿದೆ. ಕೆಲವೇ ಸೀಟುಗಳು ಲಭ್ಯವಿದ್ದು, ಆಸಕ್ತರು ತಕ್ಷಣ ಅರ್ಜಿ ಸಲ್ಲಿಸಬಹುದು. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದೊಂದಿಗೆ ಸಂಯೋಜನೆಗೊಂಡಿರುವ ಕಾಲೇಜಿಗೆ, ಯೋಗ ವಿಜ್ಞಾನದಲ್ಲಿ ಸಂಶೋಧನಾತ್ಮಕ ಅಧ್ಯಯನಕ್ಕೆ ಮಂಗಳೂರು ವಿ.ವಿ. ಮಾನ್ಯತೆ ನೀಡಿದೆ.
ಐದೂವರೆ ವರ್ಷಗಳ ಪದವಿ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯ ವಿಜ್ಞಾನ ವಿಷಯಗಳಲ್ಲಿ ಕನಿಷ್ಠ ಶೇ 45 ಅಂಕ ಗಳಿಸಿರಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು. (ದೂರವಾಣಿ 08256- 236188/ 236343/ 94482 52696)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.