
ಚಾಂಗ್‌ಝೌ (ಚೀನಾ) (): ಭಾರತದ ಅಗ್ರಮಾನ್ಯ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಚೀನಾ ಓಪನ್ ಸೂಪರ್ 1000 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಿದರು. ಆದರೆ, ಉದಯೋನ್ಮುಖ ಆಟಗಾರ್ತಿ ಉನ್ನತಿ ಹೂಡಾ ಅವರ ಕನಸಿನ ಓಟಕ್ಕೆ ತೆರೆಬಿತ್ತು.
ಏಷ್ಯನ್ ಗೇಮ್ಸ್ ಚಾಂಪಿಯನ್ ಸಾತ್ವಿಕ್–ಚಿರಾಗ್ ಜೋಡಿಯು 21-18, 21-14ರಿಂದ ಮಲೇಷ್ಯಾದ ಓಂಗ್ ಯೂ ಸಿನ್ ಮತ್ತು ಟಿಯೊ ಈ ಯಿ ಅವರನ್ನು ಹಿಮ್ಮೆಟ್ಟಿಸಿತು. ಈ ಗೆಲುವಿನಿಂದಾಗಿ ಭಾರತದ ಆಟಗಾರರು, ಮಲೇಷ್ಯಾ ಜೋಡಿ ವಿರುದ್ಧ ಗೆಲುವಿನ ದಾಖಲೆಯನ್ನು 7–3ಕ್ಕೆ ವಿಸ್ತರಿಸಿಕೊಂಡರು.
ಹೂಡಾ ನಿರ್ಗಮನ: 17 ವರ್ಷದ ಹೂಡಾ ಮಹಿಳೆಯರ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ 16-21, 12-21ರಿಂದ ವಿಶ್ವದ ನಾಲ್ಕನೇ ಕ್ರಮಾಂಕದ ಆಟಗಾರ್ತಿ ಅಕಾನೆ ಯಮಗುಚಿ (ಜಪಾನ್) ಅವರಿಗೆ ಮಣಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.