
ಕಾರ್ಲೋಸ್ ಅಲ್ಕರಾಜ್
(ಚಿತ್ರ ಕೃಪೆ: X/@atptour)
ಟುರಿನ್ (ಇಟಲಿ): ಎಟಿಪಿ ಫೈನಲ್ಸ್ ಟೆನಿಸ್ ಟೂರ್ನಿಯಲ್ಲಿ ಸ್ಪೇನ್‌ನ ಕಾರ್ಲೋಸ್ ಅಲ್ಕರಾಜ್ ಹಾಗೂ ಜರ್ಮನಿಯ ಅಲೆಕ್ಸಾಂಡರ್ ಜ್ವೆರೆವ್ ಗೆಲುವಿನೊಂದಿಗೆ ಶುಭಾರಂಭ ಮಾಡಿಕೊಂಡಿದ್ದಾರೆ.
ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಅಗ್ರ ಶ್ರೇಯಾಂಕಿತ ಅಲ್ಕರಾಜ್ ಅವರು, ಆಸ್ಟ್ರೇಲಿಯಾದ ಅಲೆಕ್ಸ್ ಡಿ ಮಿನೌರ್ ವಿರುದ್ಧ 7-6 (7/5), 6-2ರ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.
ಕಳೆದೆರಡು ಸಾಲಿನಲ್ಲಿ ಎಟಿಪಿ ಫೈನಲ್ಸ್ ಟೆನಿಸ್ ಟೂರ್ನಿಯ ಆರಂಭಿಕ ಪಂದ್ಯಗಳಲ್ಲಿ ಸೋಲನುಭವಿಸಿದ್ದ ಅಲ್ಕರಾಜ್ ಈ ಬಾರಿ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದಾರೆ.
ಮತ್ತೊಂದೆಡೆ ಅಮೆರಿಕದ ಬೆನ್ ಶೆಲ್ಟನ್ ಮೇಲೆ ಅಲೆಕ್ಸಾಂಡರ್ ಜ್ವೆರೆವ್ 6-3, 7-6 (8/6)ರ ಅಂತರದಲ್ಲಿ ಗೆದ್ದಿದ್ದಾರೆ.
ಎಟಿಪಿ ಫೈನಲ್ಸ್ ಟೆನಿಸ್ ಟೂರ್ನಿಯಲ್ಲಿ ಅಗ್ರ ಎಂಟು ಆಟಗಾರರಿಗೆ ಆಡಲು ಮಾತ್ರ ಅವಕಾಶವಿರುತ್ತದೆ. ಎರಡು ಗುಂಪುಗಳಲ್ಲಿ ರೌಂಡ್ ರಾಬಿನ್ ಮಾದರಿಯಲ್ಲಿ ಟೂರ್ನಿ ನಡೆಯುತ್ತಿದೆ.
ಭುಜ ನೋವಿನಿಂದಾಗಿ ಸರ್ಬಿಯಾ ತಾರೆ ನೊವಾಕ್ ಜೊಕೊವಿಚ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ.
ಕಳೆದ ಸಾಲಿನಲ್ಲಿ (2024) ಯಾನಿಕ್ ಸಿನ್ನರ್ ಚಾಂಪಿಯನ್ ಆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.